ಈ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಇಲ್ಲ!

ಈ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಇಲ್ಲ!

ದಾವಣಗೆರೆ : ಕೇಂದ್ರ ಸರ್ಕಾರದಿಂದ ಉತ್ತಮ ಬಜೆಟ್ ನೀಡುವ ನಿರೀಕ್ಷೆ ಇದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಡಬಲ್ ಎಂಜಿನ್ ಇದ್ದಂತೆ ಎಂದು ಅಮಿತ್ ಶಾ ಹೇಳಿದ್ದಾರೆ ಎಂದು ಬಿ.ಸಿ. ಪಾಟೀಲ್ ತಿಳಿಸಿದರು.

ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ ತಿಂಗಳಿನಲ್ಲಿ ಕರ್ನಾಟಕ ಬಜೆಟ್ ನಡೆಯಲಿದೆ. ಈ ಬಾರಿ ಪ್ರತ್ಯೇಕ ಕೃಷಿ ಬಜೆಟ್ ಇಲ್ಲ” ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, “ಕೇಂದ್ರ ಬಜೆಟ್‌ನಲ್ಲಿ ವಿಶೇಷವಾಗಿ ಕೃಷಿ ವಲಯಕ್ಕೆ ಒತ್ತು ನೀಡಲಿದ್ದಾರೆ. ರಾಜ್ಯ ಸರ್ಕಾರ ಹಾಗೂ ಕೃಷಿ ಕ್ಷೇತ್ರಕ್ಕೆ ಏನೇನು ಬೇಡಿಕೆಗಳಿವೆ ಎಂಬುದನ್ನು ನಾವು ಈಗಾಗಲೇ ನೀಡಿದ್ದೇವೆ” ಎಂದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಿದೆ. ಸ್ವಾತಂತ್ರ‍್ಯದ ಬಳಿಕ ಬಜೆಟ್ ಪುಸ್ತಕವನ್ನು ಮುದ್ರಿಸದೇ ಬಜೆಟ್ ಮಂಡನೆ ಮಾಡಲಾಗುತ್ತಿದೆ.

Related