ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ: ಸಿಎಂ

ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ: ಸಿಎಂ

ರಾಯಚೂರು: ನಮ್ಮ ಕಾಂಗ್ರೆಸ್ ಸರ್ಕಾರ ಕೇವಲ ಒಂದು ಜಾತಿಗೆ ಮೀಸಲಾದ ದೇಶದಲ್ಲಿರುವಂತಹ ಎಲ್ಲಾ ಜಾತಿಗಳಿಗೂ ನಾವು ಪ್ರೋತ್ಸಾಹ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇಂದು ಜಿಲ್ಲೆಯ ದೇವದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಒಂದು ಧರ್ಮ, ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ. ನಾವು ಎಲ್ಲಾ ಧರ್ಮ, ಎಲ್ಲಾ ಜಾತಿಯವರ ಪರವಾಗಿ ಇರುವವರು ಎಂದು ಹೇಳಿದರು.

ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದರು.

 

Related