ರಾಜಧಾನಿಯಲ್ಲಿ ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ನೋಟಿಸ್​​!

ರಾಜಧಾನಿಯಲ್ಲಿ ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ನೋಟಿಸ್​​!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿಗೆ ಪಬ್, ಬಾರ್ ಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಇದರಿಂದ ನಗರದಲ್ಲಿ ಸಮಯ ಮೀರಿ ಪಬ್ ಬಾರ್ ಗಳು ತನ್ನ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರಿಂದ ಸಾರ್ವಜನಿಕರು ಬೇಸತ್ತಿದ್ದಾರೆಂದು ತಿಳಿದು ಬರುತ್ತಿದೆ.

ಇನ್ನು ಬಿಬಿಎಂಪಿ ಅಧಿಕಾರಿಗಳು ಪಬ್ ಮತ್ತು ಬಾರ್ ಗಳ ಮೇಲೆ ನೋಟಿಸ್ ಜಾರಿ ಮಾಡಿದ್ದಾರೆ.

ಹೌದು, ಬಿಬಿಎಂಪಿಯ ಆರೋಗ್ಯಾಧಿಕಾರಿಗಳು 12 ಪಬ್, ಬಾರ್‌ಗಳನ್ನು ಮುಚ್ಚಿಸಿದ್ದಾರೆ. ಇನ್ನು 86ಕ್ಕೆ ನೋಟಿಸ್ ನೀಡಿದ್ದಾರೆ. ಬಿಬಿಎಂಪಿಯ ಎಂಟು ವಲಯದ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಪಬ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಅಗ್ನಿ ಅವಘಡದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದ್ದು, ಈ ಪೈಕಿ‌ 232 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. 12 ಉದ್ದಿಮೆಗಳನ್ನು ಬಂದ್​ ಮಾಡಲಾಗಿದೆ.

ವಲಯ ಆರೋಗ್ಯಾಧಿ ಕಾರಿಗಳಿಗೆ ಏಳು ದಿನ ಸಮಯ ನೀಡಲಾಗಿದೆ, ಈ ಏಳು ದಿನದಲ್ಲಿ ತಮ್ಮ ವಲಯ ವ್ಯಾಪ್ತಿಯಲ್ಲಿ ಎಷ್ಟು ಪಬ್, ಬಾರ್ ಮತ್ತು ಸ್ಟೋರೆಂಟ್‌ಗಳಿವೆ, ಎಷ್ಟು ಪಬ್, ಬಾರ್ ಮತ್ತು ಸೋರೆಂಟ್‌ಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಎಲ್ಲಿ ನ್ಯೂನ್ಯತೆಗಳಿವೆ. ಪಬ್, ಬಾರ್‌ ಮತ್ತು ರೆಸ್ಟೋರೆಂಟ್ ನಡೆಸುವುದಕ್ಕೆ ಬಿಬಿಎಂಪಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳಿಂದ ಪರವಾನಗಿ ಪಡೆಯಲಾಗಿದೆಯೇ? ಎಷ್ಟು ಕಡೆ ಅನಧಿಕೃತವಾಗಿ ಮತ್ತು ಕಾನೂನು ಉಲ್ಲಂಘಿಸಿ ನಡೆಸಲಾಗುತ್ತಿದೆ ಎಂದು ಪರಿಶೀಲಿಸಲು ಸೂಚಿಸಲಾಗಿದೆ.

 

Related