ಜಲಸಮಾಧಿ ಪರಿಹಾರಕ್ಕೆ ಸೂಚನೆ

ಜಲಸಮಾಧಿ ಪರಿಹಾರಕ್ಕೆ ಸೂಚನೆ

ಬೆಂಗಳೂರುಮಂಡ್ಯ ಜಿಲ್ಲೆಯಲ್ಲಿ ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಗೀತಾ, ಕು.ಸವಿತಾ ಹಾಗೂ ಕು.ಸೌಮ್ಯ ಅವರಿಗೆ ತಲಾ 5 ಲಕ್ಷ ರೂ.ಗಳು ಹಾಗೂ ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ರಶ್ಮಿ ಮತ್ತು ಇಂಚರಾ, ಕೆ.ಆರ್.ಪೇಟೆ ತಾಲ್ಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರುಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಜಲಸಮಾಧಿಯಾದ ಏಳು ಮಂದಿಗೆ 22 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.

Related