ಕೊರೋನಾ ಕ್ರಮಕ್ಕೆ ಸೂಚನೆ

ಕೊರೋನಾ ಕ್ರಮಕ್ಕೆ ಸೂಚನೆ

ಗದಗ : ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ. ಸಿ.ಪಾಟೀಲ ಕೋವಿಡ್-19 ಸೋಂಕು ನಿಯಂತ್ರಣ ಕುರಿತ ನರಗುಂದ ತಾಲೂಕಿನ ಅಧಿಕಾರಿಗಳ ಸಭೆ ನಡೆಸಿದರು.

ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸುತ್ತಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳ ವಾರ್ಡ್ ಮಟ್ಟದಲ್ಲಿ ಈ ಸೋಂಕು ನಿಯಂತ್ರಣಕ್ಕೆ ಜನರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸುವದು, ಸಾಮಾಜಿಕ ಅಂತರ ಕಾಯ್ದುಕೊಂಡು ಕೈಗಳನ್ನು ಆಗಾಗ ಸ್ವಚ್ಛಗೊಳಿಸುವ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಹೊರ ಜಿಲ್ಲೆಗಳಿಂದ ಆಗಮಿಸುವವರ ಮೇಲೆ ನಿಗಾವಹಿಸಬೇಕು.

 

Related