ಮಾಸ್ಕ್ ಡೇ ಜಿಲ್ಲಾಡಳಿತಗಳಿಗೆ ಸೂಚನೆ

ಮಾಸ್ಕ್ ಡೇ ಜಿಲ್ಲಾಡಳಿತಗಳಿಗೆ ಸೂಚನೆ

ಬೆಂಗಳೂರು : ಜೂನ್ 18ರಂದು ಮಾಸ್ಕ್ ದಿನವನ್ನಾಗಿ ಆಚರಿಸುವ ಸಲುವಾಗಿ ರಾಜ್ಯ ಸರಕಾರ ಜಿಲ್ಲಾಡಳಿತಕ್ಕೆ ಪಾದಯಾತ್ರೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಸೂಚನೆ ನೀಡಿದೆ.

ಕೋವಿಡ್ ಸೋಂಕನ್ನು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು ಮುಖಗವಸನ್ನು ಧರಿಸುವುದು, ಸಾಬೂನಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಕಾಪಾಡುವುದು ಮುಖ್ಯವಾಗಿದ್ದು ಈ ವಿಚಾರಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಸರಕಾರ ಜೂನ್ 18 ಗುರುವಾರದಂದು ಮಾಸ್ಕ್ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ.

ಜಿಲ್ಲಾ ಮತ್ತು ತಾಲೂಕು ಆಡಳಿತವು ಚುನಾಯಿತ ಪ್ರತಿನಿಧಿಗಳು, ಗಣ್ಯ ವ್ಯಕ್ತಿಗಳು, ವೈದ್ಯಕೀಯ ಸಿಬ್ಬಂದಿಗಳನ್ನು ಸೇರಿಸಿಕೊಂಡು ಪಾದಯಾತ್ರೆಯ ಮೂಲಕ ಜನರಲ್ಲಿ ಕೋವಿಡ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಸೂಚನೆ ನೀಡಿದೆ.

Related