ನೋಟೀಸ್ ವಾಪಸ್ ಗೆ ಸೂಚನೆ: ರಾಮಲಿಂಗಾರೆಡ್ಡಿ

ನೋಟೀಸ್ ವಾಪಸ್ ಗೆ ಸೂಚನೆ: ರಾಮಲಿಂಗಾರೆಡ್ಡಿ

ಚಿಕ್ಕಮಗಳೂರು: ಹಿರೇಮಗಳೂರು ಕೋದಂಡ ರಾಮಚಂದ್ರಸ್ವಾಮಿ ದೇವಾಲಯದ ಅರ್ಚಕರು, ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಅವರಿಗೆ ವೇತನ ತಡೆಹಿಡಿದು ಜಿಲ್ಲಾಡಳಿತ ನೋಟಿಸ್ ನೀಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಇದರಲ್ಲಿ ಕಣ್ಣನ್ ಅವರದು ಯಾವುದೇ ತಪ್ಪಿಲ್ಲ. ಅವರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ ಎಂದು ತಿಳಿಸಿದ್ದಾರೆ.

ದೇವಾಲಯದ ವಾರ್ಷಿಕ ಆದಾಯಕ್ಕಿಂತ ವೆಚ್ಚವೇ ಹೆಚ್ಚುವರಿಯಾಗಿದೆ ಎಂದು ದೇವಸ್ಥಾನದ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು ರಾಜ್ಯ ಸರ್ಕಾರವು ವಾಪಸ್ ಕೇಳಿತ್ತು. ಈ ಸಂಬಂಧ ಹಿರೇಮಗಳೂರು ಕಣ್ಣನ್ ಅವರ ವೇತನ ತಡೆಹಿಡಿದು ಚಿಕ್ಕಮಗಳೂರು ತಹಸೀಲ್ದಾರ್ ನೋಟಿಸ್ ನೀಡಿದ್ದರು.

ರಾಮಲಿಂಗಾರೆಡ್ಡಿ ಅವರು, ಪ್ರತಿ ವರ್ಷ ತಸ್ತೀಕ್ ಹಣವನ್ನು ದೇವಾಲಯಗಳಿಗೆ ನೀಡಲಾಗುತ್ತದೆ. ಕಣ್ಣನ್ ಅವರ ವಿಚಾರದಲ್ಲಿ 24 ಸಾವಿರ ಬದಲು 90 ಸಾವಿರ ರೂ. ನೀಡಲಾಗಿದೆ. ಇದರಲ್ಲಿ ತಹಸೀಲ್ದಾರ್‌ರವರ ತಪ್ಪಿನಿಂದ ಈ ರೀತಿ ಆಗಿರುವುದು ಗಮನಕ್ಕೆ ಬಂದಿದೆ. ಯಾವುದೇ ಕಾರಣಕ್ಕೂ ಕಣ್ಣನ್ ಅವರ ತಪ್ಪಲ್ಲ. ಇಲಾಖೆಯ ಆಯುಕ್ತರ ಗಮನಕ್ಕೆ ತಂದು ನೊಟೀಸ್ ವಾಪಸ್ ಪಡೆಯುವಂತೆ ಸೂಚಿಸುತ್ತೇನೆ. ಹೆಚ್ಚುವರಿ ಪಾವತಿ ಮಾಡಿರೋ ಹಣವನ್ನು ತಹಸೀಲ್ದಾರ್‌ರಿಂದ ವಸೂಲು ಮಾಡಬೇಕು. ಕಣ್ಣನ್ ಅವರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ ಎಂದು ತಿಳಿಸಿದ್ದಾರೆ.

ಹಿಂದು ಆಚಾರ-ವಿಚಾರ ಹಾಗೂ ಧಾರ್ಮಿಕ ಕೇಂದ್ರಗಳನ್ನೇ ಗುರಿಯನ್ನಾಗಿಸಿಕೊಂಡು ಕಾಂಗ್ರೆಸ್ ಸರ್ಕಾರ ಆಗಾಗ ಸರಣೀ ರೂಪದಲ್ಲಿ ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಧರ್ಮನಿಷ್ಠರ ಸಹನೆಯನ್ನು ಕೆಣಕುವಂತಿದೆ ಎಂದು ಟೀಕಿಸಿದ್ದಾರೆ.

ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ಅನ್ನು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಿ ಸರ್ಕಾರ ವಾಪಸ್ ಪಡೆಯಬೇಕು, ಇಂಥ ಅಸಂಬದ್ಧ ನೋಟಿಸ್ ನೀಡಿದ ಅವಿವೇಕಿ ಅಧಿಕಾರಿಯನ್ನು ಕೂಡಲೇ ಅಮಾನತ್ತಿನಲ್ಲಿಡಲಿ ಎಂದು ಒತ್ತಾಯಿಸಿದ್ದಾರೆ.

Related