ಕುಖ್ಯಾತ ಡ್ರಗ್ ಪೆಡ್ಲರ್ ಬಂಧನ

ಕುಖ್ಯಾತ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು : ಡ್ರಗ್ ಪೆಡ್ಲರ್‌ಗಳ ವಿರುದ್ಧ ಪೊಲೀಸರ ಸಮರ ಮುಂದುವರೆದಿದ್ದು, ಸಿಸಿಬಿ ಹಾಗೂ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡದಿಂದ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ.

ಡ್ರಗ್ಸ್ ಪೆಡ್ಲರ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ, ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದಲ್ಲಿ ವಾಸವಾಗಿದ್ದ ನೈಜೀರಿಯಾದ ಉಗೋಚುಕ್ವು ವಿಕ್ಟರ್ ಎಂಬುವನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನ ಬಳಿ 40 ಲಕ್ಷ ಬೆಲೆಯ ಎಂಡಿಎಂಎ, 2 ಮೊಬೈಲ್, 1 ತೂಕದ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.

ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದಿದ್ದ ಆರೋಪಿ, ಭಾರತದ ಕಾನೂನಿಗೆ ಗೌರವ ಕೊಡದೆ, ಪಾಸ್‌ಪೋರ್ಟ್, ವೀಸಾ ನಿಯಮ ಉಲ್ಲಂಘಿಸಿ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಅಲ್ಲದೇ ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ಸಕ್ರಿಯವಾಗಿ ತೊಡಗಿದ್ದಾರೆ.

2018ರಿಂದಲೇ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ತಿಳಿದು ಬಂದಿದ್ದು, ಈತನ ವಿರುದ್ದ ಈಗಾಗಲೇ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.

ಕಾರ್ಯಾಚರಣೆಯಲ್ಲಿ ಜಂಟಿ ಪೊಲೀಸ್ ಆಯುಕ್ತರು ಮತ್ತು ಉಪ ಪೊಲೀಸ್ ಆಯುಕ್ತರು, ಅಪರಾಧ-2, ಬೆಂಗಳೂರು ಅವರ ಮಾರ್ಗದರ್ಶನದಲ್ಲಿ, ಸಿಸಿಬಿ ಸಹಾಯಕ ಪೊಲೀಸ್ ಆಯುಕ್ತ ಕೆ.ಸಿ. ಗೌತಮ್ ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಜಿ. ಲಕ್ಷ್ಮಿ ಕಾಂತಯ್ಯ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Related