ಜುಲೈ 3ರಂದು ಬಿಜೆಪಿ ಸಿಎಂ ಮನೆಗೆ ಮುತ್ತಿಗೆ..!

ಜುಲೈ 3ರಂದು ಬಿಜೆಪಿ ಸಿಎಂ ಮನೆಗೆ ಮುತ್ತಿಗೆ..!

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಜುಲೈ 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲು ತಯಾರಿ ನಡೆಸುತ್ತಿದೆ.

ಈ ಕುರಿತು ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರವರು ಹೇಳಿದ್ದಾರೆ ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಜವಾಬ್ದಾರಿ ಹೊರಬೇಕು. ಅಲ್ಲದೆ ಈ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ಬಸವರಾಜ್ ದದ್ಧಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸಿದ ಸಿಎಂ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 193 ಬ್ಯಾಂಕ್ ಖಾತೆಗಳಿಂದ 10 ಕೋಟಿ ನಗದು ವಶಕ್ಕೆ ಪಡೆದಿದ್ದಾರೆ.

Related