ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಸೆ.27 ರಂದು ಬಂದ್

ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಸೆ.27 ರಂದು ಬಂದ್

ಶಹಾಪುರ :ವಿವಾದಿತ ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ಸೆ.27 ರಂದು ನಡೆಯಲಿರುವ ಭಾರತ್ ಬಂದ್ ಹಿನ್ನಲೆ ಜಿಲ್ಲೆಯಾದ್ಯಂತ ಬಂದ್ ಮಾಡಲಾಗುವುದು ಎಂದು ಹಿರಿಯ ನ್ಯಾಯವಾದಿಗಳಾದ ಬಾಸ್ಕರ್‌ರಾವ್ ಮೂಡಬೂಳ ತಿಳಿಸಿದ್ದಾರೆ.
ನಗರದ ಬಸವೇಶ್ವರ ವೃತ್ತದಲ್ಲಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಲಾಗುತ್ತದೆ. ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಬಂದ್‌ಗೆ ಕರೆ ನೀಡಿದ್ದು, ಪ್ರತಿಯೊಬ್ಬ ಅನ್ನದಾತರು ಕೂಡ ಭಾಗವಹಿಸುವುದು ಅಗತ್ಯವಾಗಿದೆ. ರೈತಾಪಿ ಕೃಷಿಯನ್ನು ಸಂಪೂರ್ಣವಾಗಿ ನಾಶ ಮಾಡಿ ಕೇಂದ್ರ ಸರಕಾರ ಕಾರ್ಪೋರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡಲು ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾರಕವಾದ ಬೆಳವಣಿಗೆಯಾಗಿದೆ. ರೈತ ವಿರೋಧಿ ಕೃಷಿ ಕಾಯ್ದೆಗಳಾದ ವಿದ್ಯುತ್, ಭೂ ಸುಧಾರಣೆ, ಎಪಿಎಂಸಿ, ಕನಿಷ್ಠ ಬೆಲೆ, ಕಾರ್ಮಿಕ ಕಾಯ್ದೆ ತಿದ್ದುಪಡಿ ಹಿಂತೆಗೆದುಕೊಳ್ಳಬೇಕು ಎಂದರು.
ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚೆನ್ನಪ್ಪ ಆನೆಗುಂದಿ ಮಾತನಾಡಿ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಇಳಿಸಬೇಕು. ಮಹಿಳೆಯರ ಮೇಲೆ ನಡೆಯುತ್ತೀರುವ ದೌರ್ಜನ್ಯ, ಅತ್ಯಾಚಾರ ತಡೆಗಟ್ಟಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಯಲ್ಲಮ್ಮದೇವಿ ಗುಡಿ, ಸೈದಾಪೂರ, ಸಗರ, ಗೋಗಿ ಹೊಸಕೇರಿ, ರಸ್ತಾಪೂರ ದಿಂದ ಶಾರದಳ್ಳಿ ರಸ್ತೆ ಹಗಲೀಕರಣ, ಡಾಂಬರೀಕರಣ ರಸ್ತೆಗಳು ಕಳಪೆ ಮಟ್ಟದಿಂದ ಕೂಡಿದ್ದು, ತನಿಖೆ ಮಾಡಿ ಸಂಬAಧಿಸಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿ ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶರಣಗೌಡ ಗೂಗಲ್, ದಾವಲಸಾಬ್ ನದಾಫ್, ಜೈಲಾಲ್ ತೋಟದಮನಿ, ಎಸ್.ಎಂ.ಸಾಗರ್ ,ಶರಣು ಮದ್ರಕಿ, ಸೇರಿದಂತೆ ಇನ್ನಿತರರಿದ್ದರು.

Related