ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ಭಾರಿ ಮಳೆ ಆಗುತ್ತಿರುವುದರಿಂದ ಈರುಳ್ಳಿ ಉತ್ಪಾದನೆಗೆ ಬಾರಿ ಹೊಡಿತಾ ಬಿದ್ದಿದ್ದು ಇದರಿಂದ ರಾಜ್ಯದಲ್ಲಿ ಇದೀಗ ಈರುಳ್ಳಿ ಬೆಲೆ ದುಪ್ಪಟ್ಟಾಗುವ ಸಾಧ್ಯತೆ ಇದೆ.
ಸಾಮಾನ್ಯವಾಗಿ ಉತ್ತರ ಕರ್ನಾಟಕದಿಂದ ರಾಜ್ಯದ ಎಲ್ಲಾ ಭಾಗಕ್ಕೆ ಈರುಳ್ಳಿ ಪೂರೈಕೆ ಆಗುತ್ತಿತ್ತು ಆದರೆ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಈರುಳ್ಳಿ ಬೆಲೆ ನಷ್ಟ ಆಗಿರುವುದರಿಂದ ಇದೀಗ ಹೊರ ರಾಜ್ಯಗಳಿಂದ ಈರುಳ್ಳಿಗಳನ್ನು ಕರ್ನಾಟಕ ರಾಜ್ಯಕ್ಕೆ ತರಿಸಿಕೊಳ್ಳಲಾಗುತ್ತಿದೆ ಆದ್ದರಿಂದ ಇದೀಗ ಒಂದು ಕೆಜಿ ಈರುಳ್ಳಿ ಬೆಲೆಗೆ ಸುಮಾರು 60 ರಿಂದ 70 ರೂಪಾಯಿಯಾಗಿದೆ. ಇದನ್ನೂ ಓದಿ: ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ: ಸಿಎಂ
ಯಶವಂತಪುರ ಹಾಗೂ ದಾಸನಪುರ ಎಪಿಎಂಸಿಗೆ ಬುಧವಾರ 127 ಲಾರಿಗಳಲ್ಲಿ 38,415 ಚೀಲ ಈರುಳ್ಳಿ ಆವಕವಾಗಿತ್ತು. ಇದರಲ್ಲಿ ರಾಜ್ಯದ ಹತ್ತಿಪ್ಪತ್ತು ಲಾರಿಗಳು ಮಾತ್ರ ಸೇರಿವೆ. ಉಳಿದವೆಲ್ಲ ಪೂನಾದಿಂದ ಬಂದಿವೆ. ಸಗಟು ದರ ಕ್ವಿಂಟಲ್ಗೆ ಕನಿಷ್ಠ 2 ಸಾವಿರದಿಂದ ಗರಿಷ್ಠ 4500 ರೂ. ಇತ್ತು. ನಗರದ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 55ರಿಂದ 60 ರೂ.ಗೆ ಮಾರಾಟವಾಗಿದೆ.