ಆನ್‍ಲೈನ್ ಪ್ಲಾಟ್‍ಫಾರ್ಮ್ಗೆ ಸಿಎಂ ಚಾಲನೆ

 ಆನ್‍ಲೈನ್ ಪ್ಲಾಟ್‍ಫಾರ್ಮ್ಗೆ ಸಿಎಂ ಚಾಲನೆ

ಬೆಂಗಳೂರು, ಏ. 20 : ಉನ್ನತ ಶಿಕ್ಷಣ ಇಲಾಖೆಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ 2020ನೇ ಸಾಲಿನ ಸಿ.ಇ.ಟಿ ಮತ್ತು ನೀಟ್ ಪರೀಕ್ಷೆಗೆ ಆನ್‍ಲೈನ್ ಕೋಚಿಂಗ್ ತರಬೇತಿಗಳನ್ನು ನಡೆಸಲು ಕಿಯೋನಿಕ್ಸ್ ಸಂಸ್ಥೆಯ ಮುಖಾಂತರ ಅಭಿವೃದ್ಧಿಪಡಿಸಿರುವ ಕಾಂಪ್ರೆಹೆನ್ಸಿವ್ ಆನ್‍ಲೈನ್ ಪ್ಲಾಟ್‍ಫಾರ್ಮ್ ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕೋವಿಡ್19ರ  ಸೋಂಕಿನಿಂದಾಗಿ ಜನ ಜೀವನದ ಜೊತೆಗೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದರು. ಶೈಕ್ಷಣಿಕ ತರಗತಿಗಳು ಹಾಗೂ ಕೋಚಿಂಗ್ ಮುಂದೂಡುವುದರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುತ್ತಾರೆ. ಸದ್ಯದ ಪರಿಸ್ಥಿತಿಯಲ್ಲಿ ಶಿ ಆನ್ ಲೈನ್ ಶಿಕ್ಷಣವೇ ಪರಿಹಾರ ಎಂದು ಭಾವಿಸಿ ಸಿಟಿ ಮತ್ತು ನೀಟ್ ವಿದ್ಯಾರ್ಥಿಗಳಿಗೆ ಕೋಚಿಂಗ್ ನೀಡಲು ತೀರ್ಮಾನಿಸಲಾಗಿದೆ.

Related