ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ

ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಪರೇಷನ್ ಕಮಲ ಮಾಡುವುದು ಸಾಧ್ಯವಿಲ್ಲ ಕೇವಲ ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅವರು ಎನ್.ಡಿ. ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ನಮ್ಮ ಶಾಸಕರು ಯಾರೂ ಮಾರಾಟವಾಗಲು  ತಯಾರಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ,  ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು  ಅವರು, ಈಗಾಗಲೇ ಕಳೆದ ಒಂದು ವರ್ಷದಿಂದ  ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ ಎಂದರು. ರಾಜಕೀಯ ಧೃವೀ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ  ಪ್ರಧಾನಮಂತ್ರಿಯಾಗಲಿದ್ದಾರೆ ಎಂದರು.

ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಡೆಂಘಿ ಪ್ರಕರಣಗಳು..!

ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ. ಹೆಚ್.  ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜೊತೆಯಲ್ಲಿದ್ದೇವೆ. ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ ಎಂದರು.

 

Related