ಆಪರೇಷನ್‌ ಕಮಲ ಪ್ರಾರಂಭವಾಗಿದ್ದು ಕರ್ನಾಟಕ ಬಿಜೆಪಿಯಿಂದ: ಸಿದ್ದು

ಆಪರೇಷನ್‌ ಕಮಲ ಪ್ರಾರಂಭವಾಗಿದ್ದು ಕರ್ನಾಟಕ ಬಿಜೆಪಿಯಿಂದ: ಸಿದ್ದು

ಮೈಸೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದು ಎಲ್ಲಾ ಕ್ಷೇತ್ರಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಚುನಾವಣಾ ಪ್ರಚಾರದ ಮಧ್ಯೆಯು ಕಾಂಗ್ರೆಸ್ ಮತ್ತು ಬಿಜೆಪಿ ಆರೋಪಗಳು ನಿಲ್ಲುತ್ತಿಲ್ಲ.

ಹೌದು, ಆಪರೇಷನ್‌ ಕಮಲ ಎಂಬುದು ಪರಿಚಯವಾದದ್ದೇ ಕರ್ನಾಟಕ ಬಿಜೆಪಿಯಿಂದ. ಶಾಸಕರಿಗೆ ಹಣ ಕೊಟ್ಟು ಖರೀದಿಸಿ, ಅವರಿಂದ ರಾಜೀನಾಮೆ ಕೊಡಿಸಿ ಉಪಚುನಾವಣೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಗೆಲ್ಲಿಸುವುದು ಆಪರೇಷನ್‌ ಕಮಲ. ಇಂಥ ದ್ವಂದ್ವ ನಿಲುವು ಇರುವಂತವರನ್ನು ಸೇರಿಸಿಕೊಂಡು ಸರ್ಕಾರ ರಚನೆ ಮಾಡಿದರೆ ಯಾವ ಸರ್ಕಾರ ಕೂಡ ಜನಪರವಾಗಿರಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಶನಿವಾರ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಜನ ಇಂದು ಬೇಸತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರ ಭ್ರಷ್ಟಾಚಾರ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದು, ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 40% ಕಮಿಷನ್‌ ಸರ್ಕಾರ ಎಂದು ದೂರಿದ್ದಾರೆ. ಪ್ರಧಾನಿ ಮೋದಿ ಅವರು ದೇಶದ ಜನರಿಗೆ ‘ನ ಖಾವೂಂಗ ನ ಖಾನೇದೂಂಗ’ ಎಂದಿದ್ದರು, ಆದರೆ ಪತ್ರ ಬರೆದು ಇಷ್ಟು ಕಾಲ ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮೋದಿ ಅವರ ಈ ಭರವಸೆ ಕೇವಲ ಪ್ರಚಾರಕ್ಕಾಗಿ ನೀಡಿದ್ದ ಹೇಳಿಕೆ ಮಾತ್ರ.

ಪಿಎಸ್‌ಐ ನೇಮಕಾತಿಯಲ್ಲಿ ಎಡಿಜಿಪಿ ಸಹಿತವಾಗಿ ಸುಮಾರು 70 ಜನ ಜೈಲಿಗೆ ಹೋದರು, ಇದು ಸಾಕ್ಷಿ ಅಲ್ಲವಾ? ಸಂತೋಷ್‌ ಪಾಟೀಲ್‌ ಎಂಬ ಬಿಜೆಪಿ ಕಾರ್ಯಕರ್ತ ಗ್ರಾಮೀಣಾಭಿವೃದ್ದಿ ಇಲಾಖೆಯಲ್ಲಿ ಗುತ್ತಿಗೆ ಕೆಲಸಗಳನ್ನು ಮಾಡಿ, ಲಂಚ ಕೊಡದ ಕಾರಣಕ್ಕೆ ಬಿಲ್‌ ಹಣ ನೀಡಲಿಲ್ಲ ಎಂದು ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ.

ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್‌ ಅವರು ಸೋಪ್‌ ಮತ್ತು ಡಿಟರ್ಜೆಂಟ್‌ ನಿಗಮದ ಅಧ್ಯಕ್ಷರಾಗಿದ್ದವರು. ಅವರ ಮಗ ಅಪ್ಪನ ಪರವಾಗಿ ಲಂಚ ಪಡೆಯಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಮನೆಯನ್ನು ಶೋಧ ಮಾಡಿದಾಗ ಸುಮಾರು 8 ಕೋಟಿ ಭ್ರಷ್ಟ ಹಣ ಸಿಗುತ್ತದೆ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಬೀತಾಗಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದರು.

 

Related