ಮುಂದಿನ ಪೀಳಿಗೆಯ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಕೆ.ಹೆಚ್.ಮುನಿಯಪ್ಪ

ಮುಂದಿನ ಪೀಳಿಗೆಯ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಕೆ.ಹೆಚ್.ಮುನಿಯಪ್ಪ

ದೇವನಹಳ್ಳಿ: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಕೃಷಿ ಇಲಾಖೆ ವತಿಯಿಂದ ಸಾವಯವ ಮತ್ತು ಸಿರಿಧಾನ್ಯಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.   ಇದನ್ನೂ ಓದಿ: ಲೋಕ ಸೇವಾ ಆಯೋಗ ಸಮ್ಮೇಳನಕ್ಕೆ ಚಾಲನೆ

ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು. ರಾಸಾಯನಿಕ ಗೊಬ್ಬರ ಬಳಸಿದರೆ ಆಹಾರ ಉತ್ಪನ್ನಗಳಲ್ಲಿ ಪೌಷ್ಟಿಕತೆ, ಗುಣಮಟ್ಟ ಇರುವುದಿಲ್ಲ. ರಾಸಾಯನಿಕ ಗೊಬ್ಬರದಿಂದ ಬೆಳೆದ ಆಹಾರ ಪದಾರ್ಥಗಳ ಸೇವನೆಯಿಂದ ಪರೋಕ್ಷವಾಗಿ ವಿಷಾಹಾರ ಮನುಷ್ಯನ ದೇಹ ಸೇರುತ್ತಿದೆ.

ಸರ್ಕಾರವು ಕೂಡ ರೈತರಿಗೆ ಉತ್ತೇಜನ ನೀಡಿ ಸಾವಯವ ಗೊಬ್ಬರ ಬಳಸಿಕೊಂಡು ಉತ್ತಮ ಇಳುವರಿಯ ಬೆಳೆ ಹಾಗೂ ಸಿರಿಧಾನ್ಯಗಳನ್ನು ಬೆಳೆಯುವಂತೆ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಇದರಿಂದ ನಮಗೆ, ಭವಿಷ್ಯದ ಮಕ್ಕಳಿಗೆ ಒಳ್ಳೆಯ ಪೌಷ್ಟಿಕಾಂಶ ಆಹಾರ ಹಾಗೂ ಗುಣಮಟ್ಟದ ಆಹಾರ ಸಿಕ್ಕಂತಾಗುತ್ತದೆ ಎಂದರು.

1930-40 ರ ದಶಕದ ನಂತರ ಕಾಲಕ್ರಮೇಣ ಜನಸಂಖ್ಯೆಯ ಹೆಚ್ಚಳದಿಂದ ಆಹಾರದ ಬೇಡಿಕೆ ಹೆಚ್ಚಾಯಿತು. ಕೃಷಿಯಲ್ಲಿ ಇಳುವರಿ ಹೆಚ್ಚಿಸಲು ರಾಸಾಯನಿಕ ಗೊಬ್ಬರ ಬಳಕೆಯು ಅನಿವಾರ್ಯವಾಗಿ ಕೃಷಿ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ಬೆಳೆಯಲು ಪ್ರಾರಂಭಿಸಿದರು. ಇದರ ಬಳಕೆಯಿಂದ ಜನರಲ್ಲಿ ನಿತ್ಯವೂ ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ.  ಸಿರಿಧಾನ್ಯಗಳು ಹೆಚ್ಚು ಹೆಚ್ಚು ಬಳಸುವುದರಿಂದ ಪೌಷ್ಟಿಕಾಂಶವುಳ್ಳ ಆಹಾರ ನಮ್ಮ ದೇಹ ಸೇರಿ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಚಿವರು ಹೇಳಿದರು.

ಸಾಧ್ಯ. ಆದರಿಂದ ರಾಸಾಯನಿಕ ರಸಗೊಬ್ಬರ ಬಳಕೆ ನಿಲ್ಲಿಸಿ, ಸಾವಯವ ಗೊಬ್ಬರ ಬಳಸಿಕೊಂಡು ಕೃಷಿಯಲ್ಲಿ ಸಾವಯವ ಬೆಳೆ ಬೆಳೆಯುವುದು ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು.

 

Related