ನಮ್ಮ ಮೈತ್ರಿ ವಿಧಾನ ಪರಿಷತ್ ಚುನಾವಣೆಗೂ ಮುಂದುವರಿಕೆ: ಬಿ ಎಸ್ ವೈ

ನಮ್ಮ ಮೈತ್ರಿ ವಿಧಾನ ಪರಿಷತ್ ಚುನಾವಣೆಗೂ ಮುಂದುವರಿಕೆ: ಬಿ ಎಸ್ ವೈ

ಮೈಸೂರು: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕೇವಲ ಲೋಕಸಭಾ ಚುನಾವಣೆಗೆ ಮಾತ್ರ ಮೈತ್ರಿ ಮಾಡಿಕೊಂಡಿಲ್ಲ. ವಿಧಾನ ಪರಿಷತ್ ಚುನಾವಣೆಗೂ ಬಿಜೆಪಿ ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಯಾವ ಕ್ಷೇತ್ರ ಬಿಟ್ಟು ಕೊಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಇಂದು ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ವಿವರ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಸ್ವಾಭಿಮಾನವಿಲ್ಲದಿದ್ದರೆ ಗುಲಾಮಗಿರಿಗೆ ಬಲಿಯಾಗಬೇಕಾಗುತ್ತದೆ: ಸಿಎಂ

ಲೋಕಸಭಾ‌ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದೂ ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಅವರು ಈಗಾಗಲೇ ಚಿಂತಿಸಿದ್ದಾರೆ. ರಾಜ್ಯದಲ್ಲಿ ನಾವು ಕನಿಷ್ಠ 24-25 ಸ್ಥಾನಗಳನ್ನು ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Related