ನಮ್ಮ ಗ್ಯಾರಂಟಿ ನಿಷೇಧ ಬಿಜೆಪಿ ಹಣೆಬರದಲ್ಲಿ ಸಾಧ್ಯವಿಲ್ಲ: ಡಿಕೆಶಿ

ನಮ್ಮ ಗ್ಯಾರಂಟಿ ನಿಷೇಧ ಬಿಜೆಪಿ ಹಣೆಬರದಲ್ಲಿ ಸಾಧ್ಯವಿಲ್ಲ: ಡಿಕೆಶಿ

ಬೆಂಗಳೂರು:  ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಬಿಜೆಪಿ ಹಣೆ ಬರಹದಲ್ಲೇ ಬರೆದಿಲ್ಲವೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಮಂಗಳವಾರ ಕರಡಿ ಸಂಗಣ್ಣ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಷೇಧ ಮಾಡುವುದು ಬಿಜೆಪಿಯವರ ಹಣೆಬರಹದಲ್ಲಿ ಬರೋದಿಲ್ಲವೆಂದು ಹೇಳಿದ್ದಾರೆ.

ಗ್ಯಾರಂಟಿ ಮುಂದುವರಿಯಲ್ಲ ಎಂದು ಬಿಜೆಪಿಯವರು ಹೇಳ್ತಿದ್ದಾರೆ. ಆದರೆ, ಅವರ ಹಣೆಬರಹದಲ್ಲಿ ಗ್ಯಾರಂಟಿ ತೆಗೆಯಲು ಸಾಧ್ಯವಿಲ್ಲ. ಬಿಎಸ್ ಯಡಿಯೂರಪ್ಪ, ಅಶೋಕ್, ವಿಜಯೇಂದ್ರ ಎಲ್ಲರಿಗೂ ಈ ಮಾತನ್ನು ಹೇಳುತ್ತಿದ್ದೇನೆ ಎಂದರು.

ಸೋಲಿನ ಭಯದಿಂದಲೇ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ನಮ್ಮ ಕಾರ್ಯಕ್ರಮ ಬಿಜೆಪಿಯನ್ನು ತೊಳೆಯುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಗ್ಯಾರಂಟಿಯ ಪರ ದೊಡ್ಡ ಅಲೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಬಿಜೆಪಿಯಲ್ಲಿ ಸುಮಾರು 100 ಸಂಸದರಿಗೆ ಈ ಬಾರಿ ಟಿಕೆಟ್ ಕೊಟ್ಟಿಲ್ಲ. ಗೆಲ್ಲುವುದಿಲ್ಲ ಎಂಬುದು ಸಮೀಕ್ಷೆಯಲ್ಲಿ ಗೊತ್ತಾಗಿರುವುರಿಂದ ಸಂಸದರಿಗೆ ಟಿಕೆಟ್ ನಿರಾಕರಿಸಿದ್ದಾರೆ. ಎನ್‌ಡಿಎ ಪರಿಸ್ಥಿತಿ ಏನು ಅಂತಾ ಇದರಲ್ಲೇ ಗೊತ್ತಾಗ್ತಿದೆ. ಸಂವಿಧಾನ ಬದಲಾವಣೆ ಸಾಧ್ಯವಿಲ್ಲ ಎಂದು ಮೋದಿ ಹೇಳುತ್ತಾರೆ. ಆದರೆ, ಅವರ ಪಕ್ಷದವರು ಸಂವಿಧಾನ ಬದಲಿಸುತ್ತೇವೆ ಎಂದಿದ್ದಾರೆ ಎಂದು ಅವರು ಹೇಳಿದರು.

 

Related