ನಮ್ಮ ಸೈನಿಕರು ನಮ್ಮ ಹೆಮ್ಮೆ: ಡಿಕೆಶಿ

ನಮ್ಮ ಸೈನಿಕರು ನಮ್ಮ ಹೆಮ್ಮೆ: ಡಿಕೆಶಿ

ಬೆಂಗಳೂರು: ಪಾಕಿಸ್ತಾನದ ಉಗ್ರರ ವಿರುದ್ಧ ಹೋರಾಡುತ್ತಿರುವ ಭಾರತೀಯ ಸೈನಿಗೆ ಯಾವುದೇ ರೀತಿ ತೊಂದರೆಯಾಗದಂತೆ ಇಂದು (ಶುಕ್ರವಾರ ಮೇ 09) ರಂದು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ತಿರಂಗಾ ಯಾತ್ರೆಯನ್ನು ಕೈಗೊಂಡಿದ್ದು, ಈ ತಿರಂಗ ಯಾತ್ರೆಗೆ ನಗರದಲ್ಲಿ ಭಾರಿ ಸ್ಪಂದನೆ ಸಿಕ್ಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ತಿರಂಗಾ ಯಾತ್ರೆ ವೇಳೆ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ನಡೆಸಿದ “ಜೈ ಹಿಂದ್ ತಿರಂಗಾ ಯಾತ್ರೆ”ಗೆ ಸಾರ್ವಜನಿಕರಿಂದ ಭಾರಿ ಬೆಂಬಲ ವ್ಯಕ್ತವಾಯಿತು. ಇದು ಪಕ್ಷಾತೀತ ಯಾತ್ರೆಯಾಗಿದ್ದರಿಂದ ಸರಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಂಘ ಸಂಸ್ಥೆಗಳು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿತ್ತು ಎಂದು ಹೇಳಿದರು.

ಈ ಯಾತ್ರೆಯಲ್ಲಿ ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸೇರಿದಂತೆ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿ, ತ್ರಿವರ್ಣ ಧ್ವಜ ಹಿಡಿದು ಭಾರತ ಹಾಗೂ ಸೈನಿಕರ ಪರ ಘೋಷಣೆಗಳನ್ನು ಕೂಗಿದರು. ಆ ಮೂಲಕ ದೇಶದ ಭದ್ರತೆ ವಿಚಾರದಲ್ಲಿ ಎಲ್ಲರೂ ಒಟ್ಟಾಗಿ ನಿಲ್ಲುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನಾ ಪಡೆಗಳಿಗೆ ಸಂಪೂರ್ಣ ಬೆಂಬಲ ಸೂಚಿಸುತ್ತೇವೆ ಎಂಬ ಸಂದೇಶ ರವಾನಿಸಲಾಯಿತು. ಇದನ್ನೂ ಓದಿ: ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರಿಗೆ ಶ್ರೇಯಸ್ಸು ಕೋರಿ ಪ್ರಾರ್ಥನೆ

“ದೇಶದ ರಕ್ಷಣೆಗೆ ನಮ್ಮ ಯೋಧರು ಮಾಡುತ್ತಿರುವ ಹೋರಾಟಕ್ಕೆ ನಾವೆಲ್ಲರೂ ಬೆಂಬಲ ನೀಡಬೇಕು. ನಮ್ಮ ಸೈನಿಕರು ನಮ್ಮ ಹೆಮ್ಮೆ” ಎಂದು ಹೇಳಿದರು.

Related