ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು..!

ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರ ಗೌಡ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ಇಂದು (ಮಂಗಳವಾರ ಜೂನ್‌ 18) ರಂದು ಪವಿತ್ರ ಗೌಡ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಇದೀಗ ತಿಳಿದು ಬಂದಿದೆ.

ಹೌದು, ದರ್ಶನ್​ ಸ್ನೇಹಿತೆ, ನಟಿ ಪವಿತ್ರಾ ಗೌಡ ಕಳೆದ ಕೆಲವು ದಿನಗಳಿಂದ ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಈಗ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು ಆಗಿದೆ. ಇಂದು (ಜೂನ್​ 18) ಪೊಲೀಸ್​ ಠಾಣೆಗೆ ವೈದ್ಯರನ್ನು ಕರೆಸಲಾಗಿತ್ತು. ಬಳಿಕ ಪವಿತ್ರಾ ಗೌಡ ಅವರನ್ನು ಪೊಲೀಸ್​ ಸ್ಟೇಷನ್​ನಿಂದ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಪವಿತ್ರಾ ಗೌಡ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಇದನ್ನೂ ಓದಿ: ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ನೂತನ ಕಛೇರಿ ಉದ್ಘಾಟನೆ

ಈ ಪ್ರಕರಣದಲ್ಲಿ ದರ್ಶನ್ ಎ2 ಆಗಿದ್ದಾರೆ. ಎಲ್ಲ ಪ್ರಮುಖ ಆರೋಪಿಗಳು ಈಗ ಪೊಲೀಸರ ವಶದಲ್ಲಿದ್ದಾರೆ. ಅಪರಾಧಿಗಳಿಗೆ ಶಿಕ್ಷೆ ಆಗಬೇಕು ಹಾಗೂ ರೇಣುಕಾ ಸ್ವಾಮಿ ಕುಟುಂಬದವರಿಗೆ ನ್ಯಾಯ ಸಿಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಕೂಡ ಒತ್ತಾಯಿಸಿದ್ದಾರೆ.

Related