ಪೆನ್​ಡ್ರೈವ್​ ಪ್ರಕರಣ​: ವಿಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾದ ಕುಮಾರಣ್ಣ

ಪೆನ್​ಡ್ರೈವ್​ ಪ್ರಕರಣ​: ವಿಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾದ ಕುಮಾರಣ್ಣ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಚುರುಕಿನ ತನಿಖೆ ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಪ್ರಕರಣ ದಾಖಲಾಗಿ ಈಗಾಗಲೇ 25 ದಿನ ಕಳೆದರೂ ಕೂಡ ವಿದೇಶದಲ್ಲಿ ತಲೆಮರಸಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಎಸ್ಐಟಿ ಅಧಿಕಾರಿಗಳು ವಿದೇಶದಲ್ಲೂ ಕೂಡ ಬಿಡು ಬಿಟ್ಟಿದ್ದಾರೆ.

ಇನ್ನು ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರದೇ ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಹೊರಬಿಟ್ಟವರ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಅವರು ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ.

ಯೆಸ್…‌ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​​ ಪ್ರಕರಣವನ್ನು ಸಿಬಿಐಗೆ ನೀಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ಇದಕ್ಕೆ ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಸಿಎಂ, ಡಿಸಿಎಂ ಪರಸ್ಪರ ಶುಭಾಶಯ ವಿನಿಮಯ

ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಈಗಾಗಲೆ ತನಿಖೆ ನಡೆಯುತ್ತಿದೆ. ಆದರೆ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣ ಹಾಗೂ ಪೆನ್​​​ಡ್ರೈವ್​​ ಮೂಲಕ ವಿವಿಧಡೆ ಹರಿಬಿಡಲಾಗಿದೆ. ಹೀಗೆ ಈ ವಿಡಿಯೋಗಳನ್ನು ಹರಿಬಿಟ್ಟು ಮಹಿಳೆಯರ ಮಾನಹಾನಿ ಮಾಡಲಾಗಿದೆ. ಅಷ್ಟೇ ಅಲ್ಲದೆ ಇದರಿಂದ ಹಲವು ಕುಟುಂಬಗಳು ಹಾಳಾಗಿವೆ. ಹೀಗಾಗಿ ವಿಡಿಯೋ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಲು ಜೆಡಿಎಸ್ ಲೀಗಲ್ ಟೀಮ್ ಈಗಾಗಲೇ ವಕೀಲರ ಜೊತೆ ಮಾತುಕತೆ ನಡೆಸಿದೆ.

ಹೀಗಾಗಿ ಈ ಪ್ರಕರಣವನ್ನು ವಿಡಿಯೋಗಳನ್ನು ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟ ನಡೆಸಲು ಹೆಚ್​​​ಡಿ ಕುಮಾರಸ್ವಾಮಿ ಸಜ್ಜಾಗಿದ್ದಾರೆ.

 

Related