ಮಾಸ್ಕ್ ಧರಿಸದಿದ್ದರೆ ತೆರಬೇಕಾಗುತ್ತೆ ದಂಡ

ಮಾಸ್ಕ್ ಧರಿಸದಿದ್ದರೆ ತೆರಬೇಕಾಗುತ್ತೆ ದಂಡ

ಮೈಸೂರು: ಮಾಸ್ಕ್ ಹಾಕದೇ ಹೊರಬರುವವರಿಗೆ ದಂಡ ಹಾಗೂ ಸಂಜೆ 6 ಗಂಟೆ ನಂತರ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸರ‍್ವಜನಿಕ ಪ್ರವೇಶಕ್ಕೆ ನರ‍್ಬಂಧ ವಿಧಿಸುತ್ತಿದ್ದೇವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಇಲ್ಲಿನ ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ತರಲು ಸಾರ್ವಜನಿಕರು ಸಹಕಾರ ಹಾಗೂ ಜವಾಬ್ದಾರಿ ಸಹ ದೊಡ್ಡದು.

ಈ ಹಿನ್ನೆಲೆ ಮಾಸ್ಕ್ ಹಾಕದೇ ಹೊರ ಬರುವುದು ಕಂಡರೆ ಪೊಲೀಸರು ದಂಡ ಹಾಕಲಿದ್ದಾರೆ ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದವರಿಗೆ 200 ರೂಪಾಯಿ ಹಾಗೂ ಗ್ರಾಮಾಂತರದಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಎಪಿಎಂಸಿಯಲ್ಲಿ ವ್ಯವಹಾರ ಮಾಡುವವರಿಗೆ ಹಾಗೂ ತರಕಾರಿ ಮಾರಾಟ ಮಾಡುವವರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಿಸಲಾಗುತ್ತದೆ. ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಸೇರುವುದರಿಂದ ಈ ತರ‍್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Related