ಕಾವೇರಿ ವಿಚಾರವಾಗಿ ಸುಪ್ರಿಂಗೆ ಅರ್ಜಿ: ಸಿಎಂ

ಕಾವೇರಿ ವಿಚಾರವಾಗಿ ಸುಪ್ರಿಂಗೆ ಅರ್ಜಿ: ಸಿಎಂ

ನವದೆಹಲಿ, ಸೆ. 20: ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ದಿಲ್ಲಿಯಲ್ಲಿ ನಡೆಸಿದ ಸರ್ವ ಪಕ್ಷ ಸಭೆ ನಾಯಕರು, ಕೇಂದ್ರ ಸಚಿವರು ಮತ್ತು ಲೋಕಸಭೆ, ರಾಜ್ಯಸಭೆ ಸದಸ್ಯರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣವಾಗಿದೆ. ಕೇಂದ್ರ ಜಲ ಸಂಪನ್ಮೂಲ ಸಚಿವರ ಜತೆ ಸಂಜೆ ಸಭೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ತಧಾನಿಯವರಿಗೆ ಇದೆ. ನಾವು ಪ್ರಧಾನ ಮಂತ್ರಿಗಳ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ. ಸಂಜೆ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಜೊತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Related