ಪೆಟ್ರೋಲ್-ಡೀಸೆಲ್ ಹೆಚ್ಚಳ

ಪೆಟ್ರೋಲ್-ಡೀಸೆಲ್ ಹೆಚ್ಚಳ

ನವದೆಹಲಿ-ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಾತ್ರ ಕಡಿಮೆ ಮಾಡುತ್ತಿಲ್ಲ. ಬದಲಿಗೆ ಕಳೆದ ೯ ದಿನಗಳಿಂದ ನಿರಂತರವಾಗಿ ಬೆಲೆಯನ್ನು ಏರಿಸುತ್ತಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ ಹಿಂದಿನಿAದಲೂ ನಡೆದುಕೊಂಡ ಬಂದಿರುವ ರೀತಿ. ಆದರೆ ನರೇಂದ್ರ ಮೋದಿ ಅವರ ಸರ್ಕಾರ ಈ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಳೆದ ೯ ದಿನಗಳಿಂದ ನಿರಂತರವಾಗಿ ಹೆಚ್ಚಳ ಮಾಡುತ್ತಿದೆ.

ಪೆಟ್ರೋಲ್, ಡೀಸೆಲ್ ಬೆಲೆ

ದೆಹಲಿ- ಪೆಟ್ರೋಲ್ ೭೬.೨೬ ರೂ., ಡೀಸೆಲ್ ೭೪.೬೨ ರೂ.

ಕೋಲ್ಕತಾ- ಪೆಟ್ರೋಲ್ ೭೮.೧೦ ರೂ., ಡಿಸೆಲ್ ೭೦.೩೩ ರೂ.

ಚೆನ್ನೈ- ಪೆಟ್ರೋಲ್ ೭೯.೯೬ ರೂ., ಡೀಸೆಲ್ ೭೨.೬೯ ರೂ.

ಮುಂಬೈ- ಪೆಟ್ರೋಲ್ ರೂ., ಡೀಸೆಲ್ ೭೩.೨೧ ರೂ.

ಬೆಂಗಳೂರು- ಪೆಟ್ರೋಲ್ ೭೮.೭೩ ರೂ., ಡೀಸೆಲ್ ೭೦.೯೫ ರೂ.

ಚಂಡೀಘಡ- ಪೆಟ್ರೋಲ್ ೭೩.೪೧ ರೂ., ಡೀಸೆಲ್  ೬೬.೭೦ ರೂ.

Related