ರೈತರಿಗೆ PM ಕಿಸಾನ್ ಸಮ್ಮಾನ್ ಅನುಕೂಲ: ಜನಾರ್ದನ ರೆಡ್ಡಿ

ರೈತರಿಗೆ PM ಕಿಸಾನ್ ಸಮ್ಮಾನ್ ಅನುಕೂಲ: ಜನಾರ್ದನ ರೆಡ್ಡಿ

ಗಂಗಾವತಿ: ಕೇವಲ ರಾಜ್ಯ ಮಾತ್ರವಲ್ಲದೆ ಇಡೀ ದೇಶದಾದ್ಯಂತ ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯಿಂದ ರೈತರಿಗೆಲ್ಲರಿಗೂ ಬಹಳ ಅನುಕೂಲವಾಗಿದೆ, ಇದರಿಂದ ರೈತರು ತಮಗೆ ಬೇಕಾದ ಗೊಬ್ಬರ ಇನ್ನಿತರ ವಸ್ತುಗಳನ್ನು ಖರೀದಿಸಲು ಸಹಾಯವಾಗಿದೆಯೆಂದು ಶಾಸಕ ಜನಾರ್ದನ್ ರೆಡ್ಡಿ ಹೇಳಿದ್ದಾರೆ.

ನಗರದಲ್ಲಿಂದು ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಪ್ರಧಾನಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತಿನ ಹಣವನ್ನು ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡುವ ಮತ್ತು ಕೃಷಿ ಸಖಿಯರಿಗೆ ಪ್ರಮಾಣಪತ್ರ ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಎಂ ಕಿಸಾನ್ ಸಮ್ಮಾನ್ ನಿಧಿಯು ಕೇಂದ್ರ ಸರ್ಕಾರದ ಉತ್ತಮ ಯೋಜನೆಯಾಗಿದ್ದು, ಜಿಲ್ಲೆಯ ಗಂಗಾವತಿಯ 15376 ರೈತರು ₹52 ಕೋಟಿಯಷ್ಟು ಪ್ರಯೋಜನ ಪಡೆದಿದ್ದಾರೆ. ದೇಶದಲ್ಲಿ 11 ಕೋಟಿಗೂ ಹೆಚ್ಚು ರೈತರು ಇದರ ಸದುಪಯೋಗ ಪಡೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಕೃಷಿ ಮತ್ತು ಪಶು ಸಖಿಯರು ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ಕೃಷಿಕರ ಉನ್ನತಿಗೆ ಶ್ರಮಿಸಬೇಕೆಂದು ತಿಳಿಸಿದರು. ಡ್ರೋಣ್ ಸಖಿಯರು ಡ್ರೋಣ್ ತಂತ್ರಜ್ಞಾನವನ್ನು ರೈತರಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ತಲುಪಿಸಬೇಕೆಂದು ತಿಳಿಸಿದರು.

 

Related