ರಾಷ್ಟ್ರದ ಆಂತರಿಕ ಭದ್ರತೆ, ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ

ರಾಷ್ಟ್ರದ ಆಂತರಿಕ ಭದ್ರತೆ, ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ

ಹುಬ್ಬಳ್ಳಿ : ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಶಾಂತಿಪಾಲನೆಗೆ ತಮ್ಮ ಪ್ರಾಣ ನೀಡಿದ ಪೊಲೀಸ್ ಹುತಾತ್ಮರನ್ನು ಸ್ಮರಿಸುವ ದಿನ ಇಂದಿನದಾಗಿದೆ. ದೇಶದ ಪ್ರಗತಿಗೆ ಶಾಂತಿ ಅವಶ್ಯಕ. ಶಾಂತಿ ಇಲ್ಲದಿದ್ದರೆ ದೇಶದ ಪ್ರಗತಿ ಇಲ್ಲ. ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ ಹಳೇ ಸಿ.ಆರ್ . ಮೈದಾನದಲ್ಲಿ ಆಯೋಜಿಸಲಾದ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಪಾಲ್ಗೊಂಡು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ ಮಾತನಾಡಿದರು.

ವಿಶ್ವದ ಹಲವು ರಾಷ್ಟ್ರಗಳು ಆಂತರಿಕ ಕ್ಷೋಭೆ, ಭಯೋತ್ಪಾದಕರ ಕೈಗೆ ಸಿಲುಕಿ ಅಲ್ಲಿನ ಮನುಷ್ಯರ ಬದುಕು ಶಾಂತಿಯುತವಾಗಿಲ್ಲ. ನಾಗರಿಕರು ಕಾನೂನು ಕಾಪಾಡುವಲ್ಲಿ ಪೊಲೀಸರಿಗೆ ಸಹರಿಸಬೇಕು. ಪೊಲೀಸರು ಕುಟುಂಬವನ್ನು ಮರೆತು ಹಗಲಿರುಳಿ ದುಡಿಯುತ್ತಾರೆ. ರಾಜ್ಯ ಸರ್ಕಾರ ಪೊಲೀಸರಿಗೆ ದೊರಕಬೇಕಾದ ಸವಲತ್ತುಗಳನ್ನು ನೀಡಲು ಸಿದ್ದವಿದೆ. ಪೊಲೀಸರ ಸೇವೆ ಉತ್ತಮಗೊಳಿಸಲು ಪ್ರಯತ್ನ ಮಾಡಲಾಗಿದೆ. ಆಫಿಸರ್ ಆನ್ ಕ್ರೈಮ್ ಹುದ್ದೆಗಳನ್ನು ಸೃಜಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಈಗಾಗಲೇ 10 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ. ಮುಂದಿನ ವರ್ಷದಲ್ಲಿ 11 ಸಾವಿರ ಮನೆ ನಿರ್ಮಾಣಕ್ಕೆ ಯೋಜಿಸಲಾಗಿದೆ. ಪೊಲೀಸ್‌ರು ಹೆಣ್ಣು ಮಕ್ಕಳ ಸುರಕ್ಷತೆ ಆಧ್ಯತೆ ನೀಡಬೇಕು. ಪೊಲೀಸ್ ಠಾಣೆಗಳು ಜನಸ್ನೇಹಿ ಆಗಬೇಕು. ಕಾನೂನಿಗೆ ಬದ್ಧವಾಗಿ ಕೆಲಸ ನಿರ್ವಹಿಸಬೇಕು. ಪ್ರತಿ ಕಾಲೇಜಿನಲ್ಲಿ ಹೆಣ್ಣುಮಕ್ಕಳಿಗೆ ಸ್ವರಕ್ಷಣೆಗೆ ತರಬೇತಿ ನೀಡಲಾಗುವುದು ಎಂದರು.

ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಬಾಲ ವಿಕಾಸ ಅಕಾಡಮಿ ಅಧ್ಯಕ್ಷ ಈರಣ್ಣ ಜಡಿ, ಹುಡಾ ಆಯುಕ್ತ ನಾಗೇಶ್ ಕಲಬುರ್ಗಿ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರತಾಪ್ ರೆಡ್ಡಿ, ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ನೈರುತ್ಯ ರೈಲ್ವೇ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕುಮಾರ್, ಆರ್.ಪಿ.ಎಫ್ ಐಜಿಪಿ ಅಲೋಕ್ ಕುಮಾರ್, ಉಪ ಪೊಲೀಸ್ ಆಯುಕ್ತ ರಾಮರಾಜನ್, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಸಂಚಾರ ಸಹಾಯಕ ಪೊಲೀಸ್ ಆಯುಕ್ತ ಎಮ್.ಎಸ್.ಹೊಸಮನಿ, ಪೊಲೀಸ್ ಇನ್ಸ್ಪೆಕ್ಟರ್ ಶ್ಯಾಮರಾವ್, ಸಬ್.ಇನ್ಸ್ಪೆಕ್ಟರ್ ಸಜ್ಜನ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಮಹಾದೇವ್ ಅಥಣಿ, ಪೊಲೀಸ್ ಕಾನ್ಸ್ ಟೆಬಲ್‌ಗಳಾದ ಆನಂದ ಕೆ ದೇಶಪಾಂಡೆ, ಪದ್ಮಾವತಿ ನವಲಗುಂದ, ಪ್ರಭುಲಿಂಗ್ ಗುಬ್ಟೆ, ನಿವೃತ್ತ ಡಿ.ಐ.ಜಿ ರವಿ ನಾಯಕ್, ಮಾಜಿ ಲೋಕಸಭಾ ಸದಸ್ಯ ಐ.ಜಿ.ಸನದಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣಪತಿ ಗಂಗೊಳ್ಳಿ ಸೇರಿದಂತೆ ಇತರೆ ಗಣ್ಯರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿದರು.

ಪೊಲೀಸ್ ಆಯುಕ್ತ ಲಾಭುರಾಮ್ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ ದೇಶದಾಂತ್ಯ ಹುತಾತ್ಮರಾದ ಪೊಲೀಸರ ಹೆಸರನ್ನು ಓದಿದರು. ಅಕ್ಟೋಬರ್ 1 ರಿಂದ ಆಗಸ್ಟ್ 31 ರವರೆಗೆ ದೇಶದಲ್ಲಿ 377 ಪೊಲೀಸರು ಕರ್ತವ್ಯ ಸಮಯದಲ್ಲಿ ಹುತಾತ್ಮರಾಗಿದ್ದಾರೆ. ಕರ್ನಾಟಕದಲ್ಲಿ 16 ಪೊಲೀಸರು ವೀರ ಮರಣ ಹೊಂದಿದ್ದಾರೆ. ಅವರ ವಿವರ ಇಂತಿದೆ. ಎ.ಎಸ್.ಐಗಳಾದ ಮಾರುತಿ ಜಿ, ರಂಗಣ್ಣ, ನಾರಾಯಣ ನಾಯ್ಕ್, ರಮೇಶ್.ಎಸ್, ಎಮ್.ಎನ್.ಮೂರ್ತಿ, ನಟರಾಜ ಎಸ್.ಎ. ಪೊಲೀಸ್ ಹಡ್ ಕಾನ್ಸಟೇಬಲ್ ಗಳಾದ ವೆಂಕಟೇಶ. ಡಿ.ಸಿ, ಬಿ.ತಿಮ್ಮಪ್ಪ, ಶಾಂತಕುಮಾರ್, ಹೆಚ್.ಎಂ.ಶಿವಕುಮಾರ್, ಮಲ್ಲಪ್ಪ, ಸಿದ್ದರಾಜ ನಾಯ್ಕ್, ಮದುಸೂಧನ್, ಗೌತಮ್ ಬುದ್ದ, ಪೊಲೀಸ್ ಕಾನ್ಸ್ಟೇಬಲ್‌ಗಳಾದ ಚೇತನ್, ರಾಮಾಚಾರಿ. ಸಹಾಯಕ ಪೊಲೀಸ್ ಆಯುಕ್ತೆ ಅನುಷಾ.ಜಿ ಪೊಲೀಸ್ ತುಕಡಿಯ ಪರೇಡ್ ನೇತೃತ್ವ ವಹಿಸಿದ್ದರು. ಹುತಾತ್ಮರ ನೆನಪಿನಲ್ಲಿ ಮೂರು ಬಾರು ವಾಲಿ ಫೈರಿಂಗ್ ಸಿಡಿಸಿ, ರಾಷ್ಟ್ರಗೀತೆ ನುಡಿಸಲಾಯಿತು.

Related