ಕಮಲದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಕಮಲದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆಯ ಮತದಾನ ಮೇ ಹತ್ತರಂದು ನಡೆದಿದ್ದು, ಎಲ್ಲಾ ಪಕ್ಷದ ಅಭ್ಯರ್ಥಿಗಳು ಮೇ 13 ರಂದು ಚುನಾವಣೆಯ ಫಲಿತಾಂಶವನ್ನು ಎದುರು ನೋಡುತ್ತಿದ್ದಾರೆ.

ಹೌದು, ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಮುಗಿದಿದ್ದು, ನಾಳೆ ಮೇ.13 ರಂದು ಫಲಿತಾಂಶ ಹೊರಬೀಳಲಿದೆ. ರಾಜ್ಯದ ಚುಕ್ಕಾಣಿಯನ್ನು ಹಿಡಿಯಲು ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಪಕ್ಷಗಳು ತಂತ್ರಗಳನ್ನು ಹೆಣೆಯುತ್ತಿವೆ. “ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ” ಎಂಬ ಘೋಷವಾಕ್ಯದಂತೆ ಸರ್ಕಾರ ರಚಿಸಲು ಬಿಜೆಪಿ ಯೋಜನೆ ರೂಪಿಸುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮುಖ್ಯಮಂತ್ರಿ ಮಂತ್ರಿ ಬಸವರಾಜ ಬೊಮ್ಮಾಯಿಯವರು, ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರನ್ನು ಕುಮಾರಕೃಪಾ ರಸ್ತೆಯ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಈಸಂದರ್ಭದಲ್ಲಿ ಸಚಿವ ಭೈರತಿ ಬಸವರಾಜ, ಸಚಿವ ಮುರುಗೇಶ್ ನಿರಾಣಿ, ಲೆಹರ್ ಸಿಂಗ್, ಎ.ಟಿ. ರಾಮಸ್ವಾಮಿ ಸಾಥ್​ ನೀಡಿದ್ದಾರೆ.

Related