ಬಿಜೆಪಿ ಪಕ್ಷದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಬಿಜೆಪಿ ಪಕ್ಷದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 2023 ನೆಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆದ್ದು ತನ್ನ ಅಧಿಕಾರದ ಗದ್ದು ಏರಿದೆ.

ಇನ್ನು ಕಾಂಗ್ರೆಸ್ ಪಕ್ಷದಲ್ಲಿಮುಂದಿನ ಮುಖ್ಯಮಂತ್ರಿ ಆಯ್ಕೆ ಯಾರೆಂಬ ಗೊಂದಲವಿದ್ದುಇಂದು ಆಗೊಂದಕ್ಕೆ ತೆರೆ ಬಿದ್ದಿದೆ

ಹೌದು, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಕಾಂಗ್ರೆಸ್​ನಲ್ಲಿ ನಿರ್ಮಾಣವಾಗಿದ್ದ ಗೊಂದಲಗಳಿಗೆ ತೆರೆ ಬಿದ್ದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಹೈಕಮಾಂಡ್ ಆಯ್ಕೆ ಮಾಡಿ ಅಧಿಕೃತ ಘೋಷಣೆ ಮಾಡಿದೆ. ಇನ್ನು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಮೇ.20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್​​ನಿಂದ ಸಿಎಂ ಆಯ್ಕೆ ಬೆನ್ನಲ್ಲೇ ಇದೀಗ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿಯಲ್ಲು ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ.

ಬಿಜೆಪಿಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಗೆ ಮುಂದಾಗಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಂಗಾಮಿ ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕನ ಆಯ್ಕೆ ಕುರಿತು ಶೀಘ್ರವೇ ಶಾಸಕಾಂಗ ಪಕ್ಷದ ಸಭೆ ಕರೆದು ಪ್ರಕ್ರಿಯೆ ನಡೆಸುತ್ತೇವೆ ಎಂದಿದ್ದಾರೆ.

 

Related