ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಏಳಿಗೆ ಸಾಧ್ಯ: ಲಕ್ಷ್ಮೀ ಹೆಬ್ಬಾಳಕರ

ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಏಳಿಗೆ ಸಾಧ್ಯ: ಲಕ್ಷ್ಮೀ ಹೆಬ್ಬಾಳಕರ

ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ಇದೇ ಏಪ್ರಿಲ್ 26ರಂದು ಮೊದಲನೇ ಹಂತದ ಮತದಾನ ನಡೆಯಲಿದ್ದು, ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ಶುಕ್ರವಾರ 14 ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಇನ್ನುಳಿದ 14 ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮೇ 07ರಂದ ನಡೆಯಲಿತದ್ದು ಆ ವಿಭಾಗದ ಅಭ್ಯರ್ಥಿಗಳು ಭರ್ಜರಿ ಮತ ಪ್ರಚಾರದಲ್ಲಿ ತೊಡಗಿದ್ದಾರೆ.

ಇನ್ನು ಬೆಳಗಾವಿ ಹಾಗೂ ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದಂತಾಗುತ್ತದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮನವಿ ಮಾಡಿದರು. ಅರಭಾವಿ ವಿಧಾನಸಭಾ ಕ್ಷೇತ್ರದ ದುರದುಂಡಿ, ರಾಜಾಪೂರ, ಶಿವಾಪೂರ, ಖಾನಟ್ಟಿ‌ ಹಾಗೂ ಮುನ್ಯಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಏಳಿಗೆ ಸಾಧ್ಯ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಪಕ್ಷ ಕಾಂಗ್ರೆಸ್ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಕಳೆದ 10 ವರ್ಷಗಳಿಂದ ಸುಳ್ಳುಗಳನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿಗೆ ಈ‌ ಸೋಲು ಗ್ಯಾರಂಟಿ ಎಂದು ಭವಿಷ್ಯ ನುಡಿದರು.

 

Related