ಜನಪ್ರಿಯ ಸೀರಿಯಲ್ ನಟಿ ಆತ್ಮಹತ್ಯೆ

ಜನಪ್ರಿಯ ಸೀರಿಯಲ್ ನಟಿ ಆತ್ಮಹತ್ಯೆ

ಚೆನ್ನೈ :    ತಮಿಳು ಜನಪ್ರಿಯ ಸೀರಿಯಲ್  ತಮಿಳು ನಟಿ ವಿಜೆ ಚಿತ್ರಾ ಅವರ ಮೃತದೇಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೀತಿಯಲ್ಲಿ ಪತ್ತೆಯಾಗಿದ್ದು, ಇದೀಗ ಅವರ ಭಾವಿ ಪತಿ ಘಟನೆ ಬಗ್ಗೆ ವಿವರಿಸಿದ್ದಾರೆ.

ಕೆಲವು ತಿಂಗಳ ಹಿಂದೆ ನಟಿ ಉದ್ಯಮಿ ಹೇಮಂತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಬಗ್ಗೆ ನಟಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಕೂಡ ಫೋಟೋ ಹಾಕಿಕೊಂಡಿದ್ದರು. ನಿಶ್ಚಿತಾರ್ಥ ಬಳಿಕದಿಂದ ಜೋಡಿ ಚೆನ್ನೈನಲ್ಲಿರುವ ಖಾಸಗಿ ಪಂಚತಾರಾ ಹೋಟೆಲ್‌ನಲ್ಲಿ ಉಳಿದುಕೊಂಡಿತ್ತು. ಇಂದು ನಸುಕಿನ ಜಾವ 2.30 ಸುಮಾರಿಗೆ ಶೂಟಿಂಗ್ ಮುಗಿಸಿಕೊಂಡು ಚಿತ್ರಾ ರೂಮಿಗೆ ಬಂದಿದ್ದಾರೆ.

ರೂಮಿಗೆ ಬಂದ ಚಿತ್ರಾ ತನ್ನ ಭಾವಿ ಪತಿ ಬಳಿ, ಫ್ರೆಶ್ ಆಗಿ ಬರುವುದಾಗಿ ಹೇಳಿ ಪತಿ ಬಳಿಯಿಂದ ತೆರಳಿದ್ದಾರೆ. ಈ ವೇಳೆ ಒಳಗಡೆಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಇದರಿಂದ ಗಾಬರಿಗೊಂಡ ಅವರು ಹೋಟೆಲ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಬಂದ ಸಿಬ್ಬಂದಿ ನಕಲಿ ಕೀ ಮೂಲಕ ರೂಮ್ ಬಾಗಿಲು ತೆರೆದಿದ್ದಾರೆ. ಈ ವೇಳೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Related