ಗಾಂಜಾ ವಶ

ಗಾಂಜಾ ವಶ

ಚಾಮರಾಜನಗರ : ಕಾಡಂಚಿನ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ, 3 ಲಕ್ಷ ರೂ. ಮೌಲ್ಯದ 26 ಕೆಜಿ ತೂಕದ 134 ಗಾಂಜಾ ಗಿಡಗಳನ್ನು ಪೂರ್ವ ಪೊಲೀಸ್ ಠಾಣೆ ಪೊಲೀಸರು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ತಾಲೂಕಿನ ಮುಂಟಿ ಗ್ರಾಮದ ಜಡೇಗೌಡ (ಮಾರಕುನ್ನ) (40) ಬಂಧಿತ. ಇನ್ನೋರ್ವ ಆರೋಪಿ ಬೆಲವತ್ತ ಗ್ರಾಮದ ಮಾದಯ್ಯ ತಲೆಮರೆಸಿಕೊಂಡಿದ್ದಾನೆ. ಬಂಧಿತನ ಪತ್ತೆಗಾಗಿ ತನಿಖೆ ಮುಂದುವರೆದಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸರಾ ಥಾಮಸ್, ಚಾಮರಾಜನಗರ ತಾಲೂಕಿನ ಬೆಲವತ್ತ ಗ್ರಾಮದ ಬಳಿಯ ಮೇಲ್ಮಾಳದ ಸರ್ವೇ ನಂ. 312ರ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆಯಲಾಗಿದೆ ಎಂಬ ಮಾಹಿತಿ ತಿಳಿದು ಬಂದಿತು.

ಹೀಗಾಗಿ ಗ್ರಾಮಾಂತರ ಸರ್ಕಲ್ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಪೂರ್ವ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ತಾಜುದ್ದೀನ್ ಮತ್ತು ಸಿಬ್ಬಂದಿ, ತಹಶೀಲ್ದಾರ್ ಚಿದಾನಂದ ಗುರುಸ್ವಾಮಿಯವರ ಸಮಕ್ಷಮ ದಾಳಿ ನಡೆಸಿದರು ಎಂದರು.

Related