“ಜಿಲ್ಲಾಧಿಕಾರಿ ನಡೆ-ಹಳ್ಳಿಯ ಕಡೆ” ಮುಂದೂಡಿಕೆ

“ಜಿಲ್ಲಾಧಿಕಾರಿ ನಡೆ-ಹಳ್ಳಿಯ ಕಡೆ” ಮುಂದೂಡಿಕೆ

ಸುರಪುರ : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದಲಿ ಏ.17 ಶನಿವಾರದಂದು ನಡೆಯಬೇಕಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಕಂದಾಯ  ಸಚಿವ ಆರ್.ಅಶೋಕ್ ಅವರು ರದ್ದುಪಡಿಸಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಕಂದಾಯ ಇಲಾಖೆಯಿಂದ ಪ್ರತಿ ತಿಂಗಳ ಮೂರನೇ ಶನಿವಾರದಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ/ತಹಸೀಲ್ದಾರರು ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ ತಂಡ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಡಿಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿಯೇ ಗ್ರಾಮ ವಾಸ್ತವ್ಯ ಮಾಡುತ್ತಿದ್ದರು.

ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ 2ನೇ ಅಲೆಯು ರಾಜ್ಯದಲ್ಲಿ ಅತಿ ಹೆಚ್ಚಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಒಂದೆಡೆ ಗುಂಪು-ಗುಂಪಾಗಿ ಸೇರಿದಲ್ಲಿ ಈ ಸಾಂಕ್ರಾಮಿಕ ರೋಗವು ಇನ್ನೂ ಹೆಚ್ಚಾಗಿ ಹರಡುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಮತ್ತು ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ.

Related