ವಿದ್ಯುತ್ ಸಂಪರ್ಕಕ್ಕೆ ಆದ್ಯತೆ : ಸುನಿಲ್ ಕುಮಾರ್

ವಿದ್ಯುತ್ ಸಂಪರ್ಕಕ್ಕೆ ಆದ್ಯತೆ : ಸುನಿಲ್ ಕುಮಾರ್

ಬೆಂಗಳೂರು : ಪಡಿತರ ಚೀಟಿ ಇರುವ ಎಲ್ಲ ಮನೆಗಳಿಗೂ ವಿದ್ಯುತ್ ಸಂಪರ್ಕ ನೀಡುವುದನ್ನು ಒಳಗೊಂಡಂತೆ ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಕನ್ನಡ, ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಕಾವೇರಿ ಭವನದಲ್ಲಿರುವ ಕೆಪಿಟಿಸಿಎಲ್ ಕಚೇರಿಯ ಸಮ್ಮೇಳನ ಸಭೆಯಲ್ಲಿ ಬುಧವಾರ ಹೇಳಿದ್ದಾರೆ.

ನಂತರ ಮಾತನಾಡಿದ ಅವರು ಬಜೆಟ್ ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಮತ್ತು ಕೇಂದ್ರ ಸರ್ಕಾರದ ಸಹಯೋಗದ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಇದರಲ್ಲಿ ನಾನು ಯಾವುದೇ ಕಾರಣಕ್ಕೆ ರಾಜಿಯಾಗುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಟ್ರಾನ್ಸ್ ಫಾರಂಗಳ ದುರಸ್ಥಿ, ಬದಲಾವಣೆ ಕುರಿತಂತೆ ಬಹಳಷ್ಟು ದೂರುಗಳು ಬರುತ್ತವೆ. ಅವುಗಳ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳಬೇಕು. ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಸಲ್ಲಿಕೆಯಾಗಬೇಕಾಗಿರುವ ಪ್ರಸ್ತಾವನೆಗಳನ್ನೂ ಸಹ ಯಾವುದೇ ವಿಳಂಬ ಮಾಡದೇ ನಿಗದಿತ ಕಾಲಾವಧಿಯೊಳಗೆ ಸಲ್ಲಿಸಲು ಕ್ರಮಕೈಗೊಳ್ಳಬೇಕು. ಎಂದರು.

ವಿದ್ಯುತ್ ಚಾಲಿತ ವಾಹನಗಳು ಹೆಚ್ಚಾಗಿ  ಕಂಡುಬರುತ್ತಿರುವುದರಿಂದ ವಿದ್ಯುತ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲು ಆದ್ಯತೆ ನೀಡಬೇಕು. ಗುರುತಿಸಿರುವ ಸ್ಥಳಗಳಲ್ಲಿ ವಿದ್ಯುತ್ ರೀಚಾರ್ಜಿಂಗ್ ಮಾಡುವ ಕಾರ್ಯಕ್ಕೆ ವೇಗ ನೀಡಬೇಕೆಂದು ಸೂಚಿಸಿದರು. ಗ್ರಾಹಕರಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರ, ಹೊಸ ವಿದ್ಯುತ್ ಸಂಪರ್ಕ ನೀಡಿಕೆ ಸೇರಿದಂತೆ ವಿವಿಧ ಸೇವೆಗಳನ್ನು ಒಂದೇ ಕಡೆ 24 ಗಂಟೆಯೊಳಗೆ ಒದಗಿಸುವ ಫಾಸ್ಟ್ಟ್ರಾಕ್‌ಸೆಲ್ ಅನ್ನು ಕೂಡಲೇ ಆರಂಭಿಸಲು ಸಚಿವರು ಆದೇಶಿಸಿದರು.

Related