ವಿದ್ಯುತ್ ಉತ್ಪಾದನೆ ಸ್ಥಗಿತ

ವಿದ್ಯುತ್ ಉತ್ಪಾದನೆ ಸ್ಥಗಿತ

ರಾಯಚೂರು : ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಕಳೆದ ಎರಡು ತಿಂಗಳಿನಿAದ ಎಲ್ಲಾ ಘಟಕಗಳು ಬಂದ್ ಆಗಿವೆ. ಇದರಿಂದಾಗಿ ಸುಮಾರು 500 ಗುತ್ತಿಗೆ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ.

ಪ್ರತಿನಿತ್ಯ 1,720 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಈಗ ಮುಚ್ಚಿದೆ. ಇದೇ ಮೊದಲ ಬಾರಿಗೆ ಇಷ್ಟು ದಿನಗಳ ಕಾಲ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಹಿರಿಯ ನೌಕರರು ಮತ್ತು ಇಂಜಿನಿಯರ್‌ಗಳನ್ನು ಬೇರೆ ವಿದ್ಯುತ್ ಉತ್ಪದನಾ ಕೇಂದ್ರಗಳಿಗೆ ನಿಯೋಜನೆ ಮಾಡಲಾಗಿದೆ.

ರಾಯಚೂರಿನ ಆರ್‌ಟಿಪಿಎಸ್ ಜೊತೆಗೆ ಬಳ್ಳಾರಿಯ ಬಿಟಿಪಿಎಸ್ ಕೇಂದ್ರದಲ್ಲಿ ಸಹ ಉತ್ಪಾದನೆ ಸ್ಥಗಿತವಾಗಿದೆ. ಜಲ ಮತ್ತು ಸೌರ ವಿದ್ಯುತ್ ಉತ್ಪಾದನೆ ಕಡಿಮೆ ಖರ್ಚಿನಲ್ಲಿ ಆಗುತ್ತದೆ. ಶಾಖೋತ್ಪನ್ನ ಕೇಂದ್ರದಲ್ಲಿ ಉತ್ಪಾದನಾ ವೆಚ್ಚ ಅಧಿಕ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

Related