ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು ಪವರ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು ಪವರ್

ಬೆಂಗಳೂರು: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ಇತ್ತೀಚಿಗೆ ಬೆಂಗಳೂರಿನ ಮಂದಿಗೆ ಬೆಸ್ಕಾಂ ಸಂಸ್ಥೆಯು ಶಾಕ್ ಮೇಲೆ ಸಾಕು ನೀಡುತ್ತಿದೆ.

ಹೌದು ಹಲವಾರು ದಿನಗಳಿಂದ ಸಿಲ್ಕಾನ್ ಸಿಟಿ ನಲ್ಲಿ ವಿದ್ಯುತ್ ವ್ಯಥೆ ಮೇಲಿಂದ ಮೇಲೆ ಕಂಡು ಬರುತ್ತಿದೆ.

ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರಿನ ಕೆಲವು ನಗರಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಿಗದಿತ ಸಮಯದಲ್ಲಿ ವಿದ್ಯುತ್ ಕಡಿತಗೊಳ್ಳುವ ಸಾಧ್ಯತೆ ಇದೆ.

ಬೆಂಗಳೂರಿನ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಕಂಪನಿಗಳು ತ್ರೈಮಾಸಿಕ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡಿರುವುದರಿಂದ ಇಂದಿನಿಂದ ಮೂರು ದಿನಗಳ ಕಾಲ ನಗರದಲ್ಲಿ ಸುಮಾರು 4ರಿಂದ 5ಘಂಟೆಗಳ ಕಾಲ ವಿದ್ಯುತ್ ಕಡಿತಗೊಳ್ಳಲಿದೆ. ಈ ವಿಷಯದ ಬಗ್ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತನ್ನ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ.

 

Related