ಬಿ.ನಾಗೇಂದ್ರ ರಾಜೀನಾಮೆಗೆ ಪ್ರಹ್ಲಾದ್ ಜೋಶಿ ಒತ್ತಾಯ

ಬಿ.ನಾಗೇಂದ್ರ ರಾಜೀನಾಮೆಗೆ ಪ್ರಹ್ಲಾದ್ ಜೋಶಿ ಒತ್ತಾಯ

ಬೆಂಗಳೂರು: ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 87 ಕೋಟಿ ಹಗರಣ ನಡೆದಿದ್ದು, ಸಚಿವ ಬಿ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರಹ್ಲಾದ್ ಜೋಶಿ ಅವರು ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಡೆತ್ ನೋಟ್‌ನಲ್ಲಿ ಹೆಸರು ನಮೂದಿಸಿರುವ ಸಚಿವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಗರಣ ಸಂಬಂಧಿಸಿದಂತೆ ನಿಗಮದಲ್ಲಿ ಅಕೌಂಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಪಿ ಎನ್ನುವರು ಆತ್ಮಹತ್ಯೆ ಮಾಡಿಕೊಂಡಿರುವ ಮೂವರು ಅಧಿಕಾರಿಗಳ ಹೆಸರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಿಧಾನಪರಿಷತ್ ಚುನಾವಣೆಗೆ 40 ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗಿದೆ: ಡಿಕೆಶಿ

ಇನ್ನು ಚಂದ್ರಶೇಖರ್ ಪಿ ಡೆತ್ ನೋಟ್‌ನಲ್ಲಿ ಮಂತ್ರಿಗಳು ಮತ್ತು ಅಧಿಕಾರಿಗಳ ಹೆಸರನ್ನು ನಮೂದಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ನಡೆಯುತ್ತಿರುವ ಲೂಟಿಗೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದರು.

ಸರಕಾರ ನೀಡಿರುವ ಭ್ರಷ್ಟಾಚಾರದ ಗ್ಯಾರಂಟಿ ಅಧಿಕಾರಿಗಳ ಆತ್ಮಹತ್ಯೆಗೆ ಕಾರಣವಾಗುತ್ತಿದೆ. ಈ ಪ್ರಕರಣದಿಂದಾಗಿ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಬೇರೆ ಉದ್ದೇಶಕ್ಕೆ ಬಳಕೆಯಾಗಬೇಕಿದ್ದ ಅನುದಾನವನ್ನು ಪ್ರಭಾವಿಗಳು ದುರ್ಬಳಕೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದರು.

 

Related