ಮೊದಲಿನಿಂದಲೇ ಪ್ರಜ್ವಲ್ ನನ್ನ ಸಂಪರ್ಕದಲ್ಲಿ ಇಲ್ಲ: ಹೆಚ್​ಡಿ ಕೆ

ಮೊದಲಿನಿಂದಲೇ ಪ್ರಜ್ವಲ್ ನನ್ನ ಸಂಪರ್ಕದಲ್ಲಿ ಇಲ್ಲ: ಹೆಚ್​ಡಿ ಕೆ

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ನನ್ನ ಸಂಪರ್ಕದಲ್ಲಿ ಇಲ್ಲವೆಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿದ್ದಾಗಲೇ ನನ್ನ ಸಂಪರ್ಕದಲ್ಲಿರದ ಪ್ರಜ್ವಲ್ ವಿದೇಶದಲ್ಲಿರುವಾಗ ಹೇಗೆ ನನ್ನ ಜೊತೆ ಸಂಪರ್ಕದಲ್ಲಿರುತ್ತಾನೆ ಎಂದು ಪ್ರಶ್ನಿಸಿದರು.

ಪ್ರಜ್ವಲ್ ರೇವಣ್ಣ ಅವರು ಯಾವುದೇ ರೀತಿಯಾಗಿ ನನ್ನ ಜೊತೆ ಸಂಪರ್ಕದಲ್ಲಿಲ್ಲ, ಸಂಪರ್ಕದಲ್ಲಿದ್ದರೆ ನಾವೇ ಅವನನ್ನು ರಾಜ್ಯಕ್ಕೆ ಕರೆಸುತ್ತಿದ್ದೇವೆ ಎಂದು ಹೇಳಿದ್ದಾರೆ.  ಇದ್ದನೂ ಓದಿ: ಇಂಡಿಯಾ ಬಣಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಸೀಟು ದೊರೆಯಲಿದೆ: ಮಲ್ಲಿಕಾರ್ಜುನ ಖರ್ಗೆ

ಇನ್ನು ಪ್ರಜ್ವಲ್ ಪ್ರಕರಣ ಸಂಬಂಧ ಎಸ್​ಐಟಿ ತನಿಖೆಯ ನಡೆಯನ್ನು ಪ್ರಶ್ನಿಸಿರುವ ಅವರು, ಎಸ್ಐಟಿ ಅನವಶ್ಯಕವಾಗಿ ಕೆಲವರನ್ನು ಬಂಧಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ದೇವೇರಾಜೇಗೌಡರನ್ನು ಪ್ರಕರಣ ದಾಖಲಾಗಿ ಒಂದು ತಿಂಗಳ ನಂತರ ಬಂಧಿಸಿದ್ದು ಯಾಕೆ? ಎಸ್ಐಟಿಯವರಿಗೆ ದೇವೇರಾಜೇಗೌಡರಿಂದ ಏನು ಮಾಹಿತಿ ಬೇಕಿದೆ? ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಮಾಹಿತಿನಾ? ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿನಾ? ಈ ಪ್ರಕರಣದ ಆಡಿಯೋ ತುಣುಕು ಬಿಡುಗಡೆಯಾಗಿತ್ತಲ್ಲ ಅದರ ಮಾಹಿತಿನಾ? ಏತಕ್ಕಾಗಿ ಎಸ್ಐಟಿ ನಾಲ್ಕು ದಿನದಿಂದ ವಶಕ್ಕೆ ಪಡೆದುಕೊಂಡು ಇಟ್ಟುಕೊಂಡಿದೆ ಎಂದು ಅವರು ಪ್ರಶ್ನಿಸಿದರು.

 

Related