ಪ್ರಜ್ವಲ್ ರೇವಣ್ಣ ಪ್ರಕರಣ; ಮಗ ಪತ್ತೆ, ತಾಯಿ ನಾಪತ್ತೆ..!

ಪ್ರಜ್ವಲ್ ರೇವಣ್ಣ ಪ್ರಕರಣ; ಮಗ ಪತ್ತೆ, ತಾಯಿ ನಾಪತ್ತೆ..!

ಹಾಸನ: ‌ ಕಳೆದ ಒಂದು ತಿಂಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಅದೇಗೋ ಈಗ ಭಾರತಕ್ಕೆ ಬಂದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ಇನ್ನು ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ, ಪ್ರಜ್ವಲ್ ಅವರು ಅಶ್ಲೀಲ ವಿಡಿಯೋ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರ ಮೇಲೆ ಈಗಾಗಲೇ ಆರೋಪ ಮಾಡಲಾಗಿದ್ದು, ಎಸ್ಐಟಿ ಅಧಿಕಾರಿಗಳು ಭವಾನಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಕೂಡ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಸಚಿವ ಬಿ. ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ..!?

ಇದರಿಂದ ಎಸ್ಐಟಿ ಅಧಿಕಾರಿಗಳಿಗೆ ಒಂದು ತಲೆನೋವು ತಪ್ಪಿದರೆ ಮತ್ತೊಂದು ತಲೆನೋವು ಎದುರಾಗಿದೆ.

ಹೌದು, ಭವಾನಿ ರೇವಣ್ಣ ಕಳೆದ 15 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ತಲೆಮರೆಸಿಕೊಂಡಿರುವುಸು ಎಸ್​ಐಟಿ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.

ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜಿಲ್ಲೆಯ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಭವಾನಿಯನ್ನು ಬೇಟಿಯಾಗಿದ್ದರು. ಶಾಸಕರನ್ನು ಬೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಭವಾನಿ ರೇವಣ್ಣ ಹೊರ ಹೋಗಿದ್ದರು.

ಆ ನಂತರ, ಅಂದರೆ ಮೇ 8 ರಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಜೈಲುಪಾಲಾಗಿದ್ದ ಪತಿ ರೇವಣ್ಣರನ್ನು ಬೇಟಿಯಾಗಲೂ ಬಂದಿಲ್ಲ. ಆ ಬಳಿಕ ರೇವಣ್ಣ ಜೈಲಿನಿಂದ ಬಿಡುಗಡೆ ಆದರೂ ಅವರನ್ನು ಬೇಟಿಯಾಗಲು ಭವಾನಿ ಬಂದಿಲ್ಲ. ಸದ್ಯ ಅವರು ನಿಗೂಢ ಸ್ಥಳದಲ್ಲಿ ಇದ್ದಾರೆ ಎನ್ನಲಾಗಿದೆ.

 

Related