ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ

ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಸಿಬಿಸಿಯಾಗಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಯಾಗುತ್ತಿದ್ದಂತೆ ಜೆಡಿಎಸ್ ನ ನಾಯಕರು ಎಚ್ಚೆತ್ತುಕೊಂಡು ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ.

ಇನ್ನು ಇದರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದು ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣನನ್ನು ಹುಚ್ಚಾಟನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಇಂದು (ಏಪ್ರಿಲ್ 29) ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ,  ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ರನ್ನು ಉಚ್ಚಾಟಿಸಲಾಗಿದೆ. ಯಾರು ಎಲ್ಲಿ ಹೋಗುತ್ತಾರೆ ಎಂದು ಕಾಯಲು ಆಗುತ್ತಾ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ನಾವೇ ಹೇಳುತ್ತಿದ್ದೇವಲ್ಲಾ, ಸಮಗ್ರ ತನಿಖೆ ಆಗಬೇಕೆಂದು. ಬಿಜೆಪಿಗೂ ಇದಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ. ನನ್ನ ತಂದೆ ಬಗ್ಗೆ ಸಂಶಯ ಪಡಬೇಡಿ ಎಂದು ಸ್ಪಷ್ಟಪಡಿಸಿದರು.

ಈ ಬಗ್ಗೆ ರಾತ್ರಿಯೇ ಹೆಚ್​.ಡಿ.ದೇವೇಗೌಡರ ಬಳಿ ಚರ್ಚೆ ಮಾಡಿದ್ದೆ. ನಾಳೆ ಹುಬ್ಬಳ್ಳಿಯ ಕೋರ್ ಕಮಿಟಿಯಲ್ಲಿ ನಿರ್ಧಾರ ಆಗಬೇಕಿತ್ತು. ಸಭೆಗೂ ಮುನ್ನ ಪ್ರಜ್ವಲ್​ ಅವರನ್ನು ದೇವೇಗೌಡ್ರು ಉಚ್ಚಾಟನೆ ಮಾಡಿದ್ದಾರೆ. ತಪ್ಪು ಮಾಡಿದ್ದರೆ ಈ ನೆಲದ ಕಾನೂನಿನಲ್ಲಿ ಶಿಕ್ಷೆ ಆಗಬೇಕು. ಈ ಪ್ರಕರಣದಲ್ಲಿ ದೇವೇಗೌಡರು, ನನ್ನನ್ನು ಯಾಕೆ ತರುತ್ತೀರಾ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ನಮ್ಮ ವ್ಯವಹಾರ, ಅವರ ವ್ಯವಹಾರ ಬೇರೆ ಬೇರೆ ನಡೆಯುತ್ತದೆ. ರಾಜ್ಯದ ಹೆಣ್ಣು ಮಕ್ಕಳ ಪರವಾಗಿ ನಾನು ಧ್ವನಿ ಎತ್ತುತ್ತೇನೆ. ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಈ ನಿಟ್ಟಿನಲ್ಲಿ ನನ್ನ ಸ್ಟ್ಯಾಂಡ್ ಮುಂದುವರೆದಿದೆ ಎಂದು ಸ್ಪಷ್ಟಪಡಿಸಿದರು.

 

Related