​ ಎಸ್ಐಟಿ ವಶದಲ್ಲಿ ಪ್ರಜ್ವಲ್ ರೇವಣ್ಣ

​ ಎಸ್ಐಟಿ ವಶದಲ್ಲಿ ಪ್ರಜ್ವಲ್ ರೇವಣ್ಣ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಮೇಲೆ ಪ್ರಕರಣ   ದಾಖಲಾದಾಗಿನಿಂದ ಇಲ್ಲಿಯವರೆಗೆ ಅಂದರೆ ಸುಮಾರು 35 ದಿನಗಳವರೆಗೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರು ಇದೀಗ ಇಂದು ಗುರುವಾರ ರಾತ್ರಿ 1:25ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಇನ್ನು ವಿಮಾನ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಮುಂಚೇನೆ ಪ್ಲಾನ್ ಮಾಡಿಕೊಂಡ ರೀತಿ ವಿಮಾನ ನಿಲ್ದಾಣದಲ್ಲಿಯೇ ಪ್ರಜ್ವಲ್ ರೇವಣ್ಣನನ್ನು ಬಂಧನ ಮಾಡಿದ್ದಾರೆ.

ಹೌದು, ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಐಎಬಿ ವಿಮಾನ ನಿಲ್ದಾಣಕ್ಕೆ ಆರೋಪಿ ಬಂದಿಳಿಯುತ್ತಿದ್ದಂತೆ ಪೊಲೀಸ್‌ ಪಡೆ ಅಲರ್ಟ್ ಆಗಿದ್ದು, ನೇರವಾಗಿ ಜೀಪ್‌ ಹತ್ತಿಸಿದ್ದಾರೆ.

ಏರ್​ಪೋರ್ಟ್​ನಿಂದ ಬೆಂಗಳೂರಿನ ಎಸ್ಐಟಿ ಕಚೇರಿಯತ್ತ ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಇತ್ತ ಸಿಐಡಿ ಕಚೇರಿ ಬಳಿ ಪೊಲೀಸರು ಅಲರ್ಟ್ ಆಗಿದ್ದು, ಇಬ್ಬರು ಇನ್ಸ್ ಪೆಕ್ಟರ್ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ಇದನ್ನೂ ಓದಿ: ದಲಿತರ ಹಣ ನುಂಗಿದ ಕಾಂಗ್ರೆಸ್‌ ಪಕ್ಷ: ಆರ್.ಅಶೋಕ್

ಪ್ರಜ್ವಲ್‌ ವಿರುದ್ಧ ಲುಕ್‌ಔಟ್‌ ನೋಟಿಸ್ ಇರೋದ್ರಿಂದ ಇಮಿಗ್ರೇಷನ್‌ ಅಧಿಕಾರಿಗಳೇ ಪ್ರಜ್ವಲ್‌ನನ್ನು ಮೊದಲು ವಶಕ್ಕೆ ಪಡೆದುಕೊಂಡಿದ್ದರು. ಅರೆಸ್ಟ್‌ ವಾರಂಟ್‌ ಕೂಡ ಇರೋದ್ರಿಂದ ಎಸ್‌ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಮಧ್ಯರಾತ್ರಿಯೇ ಪ್ರಜ್ವಲ್‌ನನ್ನ ವಶಕ್ಕೆ ಪಡೆದಿರುವ ಎಸ್‌ಐಟಿ ನಾಳೆ ಬೆಳಗ್ಗೆ ಆರೋಗ್ಯ ತಪಾಸಣೆ ನಡೆಸಿ ಜಡ್ಜ್‌ ಮುಂದೆ ಹಾಜರು ಪಡಿಸಲಿದ್ದು ಬಳಿಕ ತಮ್ಮ ವಶಕ್ಕೆ ಕೇಳಲಿದ್ದಾರೆ.

 

Related