ಅಂತೂ ಇಂತೂ ಪ್ರತ್ಯಕ್ಷನಾದ ಪ್ರಜ್ವಲ್ ರೇವಣ್ಣ

ಅಂತೂ ಇಂತೂ ಪ್ರತ್ಯಕ್ಷನಾದ ಪ್ರಜ್ವಲ್ ರೇವಣ್ಣ

ಬೆಂಗಳೂರು: ನೂರಾರು ಹೆಣ್ಣು ಮಹಿಳೆಯರಿಗೆ ಲೈಂಗಿಕ ಕಿರುಕುಳನ್ನು ನೀಡುವುದರ ಜೊತೆಗೆ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಆರೋಪಿ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ದಾಖಲಾದಗಿಂದಲೂ ಇಲ್ಲಿಯವರೆಗೂ ನಾಪತ್ತೆಯಾಗಿದ್ದ ಪ್ರಜ್ವಲ್ ರೇವಣ್ಣ ಅವರು ಇದೀಗ ದಿಡೀರನೆ ವಿಡಿಯೋ ಮಾಡುವ ಮೂಲಕ ನಾನು ಇದೇ ತಿಂಗಳು ಮೇ 31ನೇ ತಾರೀಕಿನಂದು ಭಾರತ ದೇಶಕ್ಕೆ ಬರುತ್ತೇನೆ ಎಂಬ ಮಾಹಿತಿಯನ್ನು ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಇನ್ನು ವಿಡಿಯೋ ಮಾಡುವ ಪ್ರಾರಂಭದಲ್ಲಿಯೇ ತಂದೆ-ತಾಯಿ ಸೇರಿದಂತೆ ತಾತ ಮತ್ತು ಕುಮಾರಸ್ವಾಮಿಯವರಿಗೆ ಕ್ಷಮೆ ಯಾಚಿಸುತ್ತೇನೆ ಎಂದು ವಿಡಿಯೋ ಪ್ರಾರಂಭ ಮಾಡಿದ್ದಾರೆ. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ. ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.

ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ವಿದೇಶಕ್ಕೆ ಹೋದ 3-4 ದಿನದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಾಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಿತು. ಆಗ ಕೇಸ್​ ದಾಖಲಾಗಿರಲಿಲ್ಲ. ಎಸ್​​ಐಟಿ ಕೂಡ ರಚನೆ ಆಗಿರಲಿಲ್ಲ. ಆ ನಂತರ ಎಸ್​​ಐಟಿ ನೋಟಿಸ್​ ನೀಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಆದ್ರೆ, ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು-ಪ್ರಜ್ವಲ್ ರೇವಣ್ಣ ಎಂದು ವಿದೇಶದಿಂದ ವಿಡಿಯೋ ರಿಲೀಸ್ ಮಾಡಿದ್ದಾರೆ ಎಂದಿದ್ದಾರೆ.

ಪ್ರಜ್ವಲ್ ವಿಡಿಯೋನಲ್ಲಿ ಹೇಳಿದ್ದೇನು?

ರಾಜ್ಯದಲ್ಲ ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರೂ: ಸಿಎಂ

ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ ಎಂದಿದ್ದಾರೆ.

Related