ಪ್ರಜ್ವಲ್​ ರೇವಣ್ಣಗೆ 14 ದಿನ ಜೈಲೇ ಗತಿ

ಪ್ರಜ್ವಲ್​ ರೇವಣ್ಣಗೆ 14 ದಿನ ಜೈಲೇ ಗತಿ

ಬೆಂಗಳೂರು: ನೂರಾರು ಮಹಿಳೆಯರ ಮೇಲೆ ದೌರ್ಜನ ವ್ಯಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಎಸ್ಐಟಿ ಅಧಿಕಾರಿಗಳ ವಶದಲ್ಲಿದ್ದು, ಇದೀಗ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂದನಕೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಹೌದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿದೆ. ಇಂದು (ಜೂನ್​ 10) ಎಸ್​ಐಟಿ ಕಸ್ಟಡಿ ಅಂತ್ಯವಾಗಿದ್ದರಿಂದ ಪ್ರಜ್ವಲ್​ ರೇವಣ್ಣನನ್ನು ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್​ ಪ್ರಜ್ವಲ್​ಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಮೂಲಕ ಇಷ್ಟು ದಿನ ಎಸ್​ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್​ ರೇವಣ್ಣಗೆ ಇಂದಿನಿಂದ ಪರಪ್ಪನ ಅಗ್ರಹಾರ ಜೈಲೇ ಗತಿ. ಇದನ್ನೂ ಓದಿ: 3ನೇ ವ್ಯಕ್ತಿ ಜೊತೆ ನಿವೇದಿತಾ ಹೆಸರು ತಳುಕು; ಚಂದನ್ ಶೆಟ್ಟಿ ಹೇಳಿದ್ದೇನು…?

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ SIT ತನಿಖಾ ತಂಡ ಇಂದು ಬಸವನಗುಡಿ ಮನೆಯಲ್ಲಿ ಮಹತ್ವದ ಸ್ಥಳ ಮಹಜರು ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ಮಾಡಿರುವ ಸಂತ್ರಸ್ಥೆ ಹೇಳಿಕೆ ಮೇರೆಗೆ ಎಸ್‌ಐಟಿ ಅಧಿಕಾರಿಗಳು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಬಸವನಗುಡಿ ಮನೆಯಲ್ಲಿ ಮಹಜರು ನಡೆಸುವಾಗ ಎಸ್ಐಟಿ ತಂಡ ಕೆಲ ವಸ್ತುಗಳನ್ನು ಎವಿಡೆನ್ಸ್ ಆಗಿ ಪರಿಗಣಿಸಿದೆ. ಮಹಜರು ಪ್ರಕ್ರಿಯೆ ಮೂಲಕ ಪ್ರಕರಣಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಕಲೆ ಹಾಕಲಾಗಿದೆ.

 

Related