ಹಾಸನ; ಪ್ರಜ್ವಲ್ ರೇವಣ್ಣ ಹೀನಾಯ ಸೋಲು, ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು

ಹಾಸನ; ಪ್ರಜ್ವಲ್ ರೇವಣ್ಣ ಹೀನಾಯ ಸೋಲು, ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು

ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈ ಬಾರಿ ಹೀನಾಯ ಸೋಲಾಗಿದೆ.

ಹೌದು, ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲಾಗಿದೆ. ಇದನ್ನೂ ಓದಿ:ಹ್ಯಾಟ್ರಿಕ್ ಗೆಲುವು ಸಾಧಿಸಿದ ಡಾ. ಮಂಜುನಾಥ್..!

ಇನ್ನು ಕಾಂಗ್ರೆಸ್ ಅಭ್ಯರ್ಥಿ ಎಂ ಶ್ರೇಯಸ್ ಪಾಟೀಲ್ ಅವರು ಬರೋಬ್ಬರಿ 42 ಸಾವಿರ ಮತಗಳ ಅಂತರದಲ್ಲಿ ಜಯಭೇರಿಯನ್ನು ಬಾರಿಸಿದ್ದಾರೆ.

ವಿಶೇಷವೆಂದರೆ 1999ರಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನೇ ಮಣಿಸಿದ್ದ ಕಾಂಗ್ರೆಸ್ ನಾಯಕ ದಿವಂಗತ ಪುಟ್ಟಸ್ವಾಮಿ ಗೌಡರ ಮೊಮ್ಮಗ ಕಳೆದ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಮಾಜಿ ಸಚಿವ ರೇವಣ್ಣ ವಿರುದ್ಧ ಅತ್ಯಲ್ಪ ಮತಗಳಲ್ಲಿ ಪರಾಜಯಗೊಂಡಿದ್ದ ಶ್ರೇಯಸ್ ಪಟೇಲ್ ಈ ಬಾರಿ ಪ್ರಜ್ವಲ್ ಗೆ ಎದುರಾಳಿಯಾಗಿ ಗೆದ್ದು ಬೀಗಿದ್ದಾರೆ.

ಹಾಸನ ಲೈಂಗಿಕ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಮತದಾನ ಮಾಡಿದ ಬಳಿಕ ವಿದೇಶಕ್ಕೆ ತೆರಳಿದ್ದರು. 1 ತಿಂಗಳಿಗೂ ಹೆಚ್ಚು ಕಾಲ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅವರು ಮೇ 31 ರಂದು ಮರಳಿ ಭಾರತಕ್ಕೆ ಬಂದಿದ್ದು, ಅದ್ಯ ಅವರು ಎಸ್‌ಐಟಿ ವಶದಲ್ಲಿದ್ದಾರೆ.

 

Related