ಮೈಸೂರು: ಮುಡಾ ಪ್ರಕಾರದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ ಸೆಪ್ಟೆಂಬರ್ 03) ರಂದು ತವರು ಜಿಲ್ಲೆಯಾದ ಮೈಸೂರಿಗೆ ತೆರಳಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯಲಿದ್ದಾರೆ.
ಇನ್ನು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆಯನ್ನು ಕರೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿತ್ತುದ್ದು, ಈ ಸಭೆಗೆ ರಾಜ ಮನೆತನದವರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಪ್ರಾಧಿಕಾರ ಸಭೆಗೆ ಹಾಜರಾಗುವಂತೆ ಯದುವಂಶದ ಪ್ರಮೋದಾದೇವಿ ಒಡೆಯರ್ ಅವರಿಗೆ ಪತ್ರ ಬರೆಯಲಾಗಿದೆ. ಹಾಗೇ, ಮೈಸೂರು ಭಾಗದ ಶಾಸಕರು ಸಂಸದರು ಅಧಿಕಾರಿಗಳು ಕೂಡ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಸಭೆಗೆ ಹಾಜರಾಗುವಂತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರು ಪ್ರಮೋದಾದೇವಿ ಒಡೆಯರ್ ಅವರಿಗೆ ಸೂಚನಾ ಪತ್ರ ಕಳುಹಿಸಿದ್ದಾರೆ. ಆದರೆ, ಪ್ರಮೋದಾದೇವಿ ಒಡೆಯರ್ ಅವರು ಪ್ರಾಧಿಕಾರದ ಸಭೆಗೆ ಆಕ್ಷೇಪ ವ್ಯಕ್ಯಪಡಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಇದನ್ನೂ ಓದಿ: ಭಾರತವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಬಿಜೆಪಿಯೊಂದಿಗೆ ಕೈಜೋಡಿಸಿ: ಬಿವೈವಿ
ಸೆಪ್ಟೆಂಬರ್ 3 ರಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗಿಯಾಗಲು ಸೂಚನಾ ಪತ್ರ ನೀಡಿದ್ದೀರಿ. ಪ್ರಾಧಿಕಾರದ ವಿಚಾರ ಹೈಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿದೆ. ಈಗಾಗಲೆ ನ್ಯಾಯಾಲಯ ಪ್ರಾಧಿಕಾರದ ವಿಚಾರಕ್ಕೆ ತಡೆ ನೀಡಿ, ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ. ಹೀಗಿದ್ದರೂ ತಾವು ಸಭೆ ನಡೆಸುತ್ತಿರುವುದು ಕಾನೂನುಬಾಹಿರ. ಒಂದು ವೇಳೆ ಸಭೆ ನಡೆಸಿದರೆ ಅದು ನ್ಯಾಯಾಲಯದ ತಡೆಯಾಜ್ಞೆಯ ಉಲ್ಲಂಘನೆಯಾಗುತ್ತದೆ” ಎಂದು ಪ್ರಾಧಿಕಾರದ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.