ಪ್ರಣಬ್ ಇನ್ನೂ ನೆನಪು ಮಾತ್ರ 

ಪ್ರಣಬ್ ಇನ್ನೂ ನೆನಪು ಮಾತ್ರ 

ನವದೆಹಲಿ :ಭಾರತದ ೧೩ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (೮೪) ಅವರ ಮೆದುಳು ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿರುವ ಘಟನೆ ಸೋಮವಾರ ನಡೆದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸೋಮವಾರ ಆರೋಗ್ಯ ತಪಾಸಣೆಗಾಗಿ ಆರ್ಮಿ ರಿಸರ್ಚ್ ಮತ್ತು ರೆಫರೆಲ್ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಕೋವಿಡ್ ೧೯ ಪಾಸಿಟಿವ್ ದೃಢಪಟ್ಟಿತ್ತು. ಈ ಬಗ್ಗೆ ಸ್ವತಃ ಮುಖರ್ಜಿ ಅವರು ಟ್ವೀಟ್ ಮಾಡಿ ವಿಷಯ ಹಂಚಿಕೊಂಡು, ತನ್ನ ಸಂಪರ್ಕಕ್ಕೆ ಬಂದವರು ಐಸೋಲೇಶನ್‌ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದರು.

ಮಿದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೋನಾ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿತ್ತು. ಆದರೂ ಮಿದುಳು ಶಸ್ತ್ರ ಚಿಕಿತ್ಸೆಯನ್ನು ಮುಗಿಸಿ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್ ಸಪೋರ್ಟ್) ಮಾಡುವ ಮೂಲಕ ತೀವ್ರ ನಿಗಾ ವಹಿಸಲಾಗಿತ್ತು. ಈ ಕುರಿತು ಇಂದು ಮಧ್ಯಾಹ್ನ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದ ದೆಹಲಿ ಕಂಟೈನ್ಮೆಂಟ್‌ನಲ್ಲಿರುವ ಆರ್ಮಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, “ಪ್ರಣಬ್ ಮುಖರ್ಜಿ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿಯೇ ಇದೆ. ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದನ್ನು ನಿವಾರಿಸಲು ತುರ್ತಾಗಿ ಮಿದುಳು ಶಸ್ತ್ರ ಚಿಕಿತ್ಸೆ ನಡೆಸಿದ ನಂತರವೂ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಆಗಿಲ್ಲ. ಅವರ ಆರೋಗ್ಯ ಇನ್ನಷ್ಟು ಬಿಗಡಾಯಿಸಿದೆ. ಅವರನ್ನು ವೆಂಟಿಲೇಟರಿ ಸಪೋರ್ಟ್ನಲ್ಲೀ ಇಡಲಾಗಿದೆ’ ಎಂದು ತಿಳಿಸಿದ್ದರು.
ಆದರೆ ಕೊನೆಗೂ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ತೀರಾ ವಿಷಮಸ್ಥಿತಿಗೆ ಹೋಗಿದ್ದು, ಇಹಲೋಕ ತ್ಯಜಿಸಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

Related