ಜೂನ್ 1 ರಿಂದ ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಹೋರಾಟ!

ಜೂನ್ 1 ರಿಂದ ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಹೋರಾಟ!

ಮೈಸೂರು: 2023ನೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಐದು ಗ್ಯಾರಂಟಿಗಳನ್ನು ನೀಡಿ ಸಾರ್ವಜನಿಕರನ್ನು ತನ್ನತ್ತ ಸೆಳೆದುಕೊಂಡು ಅಧಿಕಾರದ ಗದ್ದಿಗೆಯನ್ನು ಏರಿದರೂ ಸಹ ಇಲ್ಲಿಯವರೆಗೆ 5 ಗ್ಯಾರಂಟಿ ಬಗ್ಗೆ ಯಾವುದೇ ಗ್ಯಾರೆಂಟಿ ನೀಡಿಲ್ಲ.

ಕಾಂಗ್ರೆಸ್ ಸರ್ಕಾರ ಈಗಾಗಲೇ ಆಡಳಿತದಲ್ಲಿದ್ದು 5 ಗ್ಯಾರೆಂಟಿಗಳ ಬಗ್ಗೆ ಯಾವುದೇ ರೀತಿಯ ಉತ್ತರ ಸಿಕ್ಕಿಲ್ಲವೆಂದು ಸಂಸದ ಪ್ರತಾಪ್ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಗ್ಯಾರಂಟಿ ಕಾರ್ಡ್​ನಲ್ಲಿ ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಿಲ್ಲ. ಗ್ಯಾರಂಟಿಗಳ ಜಾರಿ ಬಗ್ಗೆ ಜೂನ್​ 1ರವರೆಗೆ ಕಾಯುತ್ತೇವೆ. ಷರತ್ತುಗಳು ಇಲ್ಲದೆ ಗ್ಯಾರಂಟಿಗಳನ್ನು ಜಾರಿಮಾಡಬೇಕು. ಒಂದು ವೇಳೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್​ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಾಂಗ್ರೆಸ್​ನ ಗ್ಯಾರಂಟಿ ಸ್ಕೀಂ ಪರ ಇದ್ದೇನೆ ಎಂದು ಹೇಳಿದರು.

ಈ ಫಲಿತಾಂಶ ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರಲ್ಲ. ದೇಶಕ್ಕೆ ಎಂತಹ ನಾಯಕ ಬೇಕು ಅನ್ನೋದು ಕನ್ನಡಿಗರಿಗೆ ಗೊತ್ತು. ಆದಾಯದ ಆಧಾರದ ಮೇಲೆ ಖರ್ಚು ಮಾಡಬೇಕು ಎಂಬ ನಿಯಮ ವಿಧಾನಸಭೆಯಲ್ಲಿ ಇದೆ. ವಿತ್ತಿಯ ಹೊಣೆಗಾರಿಕೆ ಬಿಲ್ ಕರ್ನಾಟಕದಲ್ಲಿ ಪಾಸ್ ಆಗಿದೆ. ಮುಂದಿನ ತಲೆಮಾರನ್ನು ಅಪಾಯಕ್ಕೆ ತಳ್ಳಬೇಡಿ.

 

Related