ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ; ಸಚಿವ

ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ; ಸಚಿವ

ಬೆಂಗಳೂರು : ರಾಜ್ಯದಲ್ಲಿ ಕೊವ್ಯಾಕ್ಸಿನ್ ಲಸಿಕೆ ಯಶಸ್ವಿಯಾಗಲಿದ್ದು, ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೊವ್ಯಾಕ್ಸಿನ್ ಕೋವಿಡ್ ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದರು.

ಈ  ವೇಳೆ   ಮಾತನಾಡಿದ  ಅವರು,  ಸಚಿವ ಡಾ. ಕೆ.ಸುಧಾಕರ್, ದೇಶದ 12 ರಾಜ್ಯಗಳ 25 ಭಾಗಗಳಲ್ಲಿ ಪ್ರಯೋಗ ನಡೆಯುತ್ತಿದ್ದು, ಸುಮಾರು 26 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ 1,600-1,800 ಜನರಿಗೆ ಲಸಿಕೆಯನ್ನು ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ.

Related