ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ನವದೆಹಲಿ : ದೇಶದ ಎಲ್ಲ ಸಹಕಾರಿ ಬ್ಯಾಂಕುಗಳನ್ನೂ ಆರ್‌ಬಿಐ ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಅಂಕಿತ ಹಾಕಿದ್ದಾರೆ.

ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಎಲ್ಲ ಸಹಕಾರಿ ಬ್ಯಾಂಕುಗಳು ಇನ್ನು ಮುಂದೆ ರಿಸರ್ವ್ ಬ್ಯಾಂಕ್ ಅಡಿಯಲ್ಲಿ ಬರುವ ಕುರಿತು ಈ ಹಿಂದೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಕುರಿತಂತೆ ನಡೆದಿದ್ದ ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಬಳಿಕ

ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.
ಕಳೆದ ವರ್ಷ ಪಂಜಾಬ್ ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನಲ್ಲಿ ನಡೆದ ಅವ್ಯವಹಾರ ಬೆಳಕಿಗೆ ಬಂದ ನಂತರ ಗ್ರಾಹಕರ ಹಿತವನ್ನು ಸರ್ಕಾರ ಕಾಪಾಡಬೇಕು ಎಂಬ ಆಗ್ರಹ ಕೇಳಿಬಂದಿತ್ತು.

ಇತ್ತೀಚೆಗಷ್ಟೇ ಕರ್ನಾಟಕದಲ್ಲೂ ಇಂತಹುದೇ ಹಗರಣ ಕೇಳಿಬಂದಿತ್ತು. ಬೆಂಗಳೂರಿನ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‌ನಲ್ಲೂ ಇತ್ತೀಚೆಗೆ ಹಗರಣ ನಡೆದಿದ್ದು, ಆರ್‌ಬಿಐ ಈ ಬ್ಯಾಂಕ್‌ನ ವ್ಯವಹಾರದ ಮೇಲೆ ನಿರ್ಬಂಧಗಳನ್ನು ವಿಧಿಸಿ ತನಿಖೆ ನಡೆಸಿದೆ.

Related