ಕೊರೋನಾ ಲಸಿಕೆ ಪಡೆದ ರಾಷ್ಟ್ರಪತಿ

ಕೊರೋನಾ ಲಸಿಕೆ ಪಡೆದ ರಾಷ್ಟ್ರಪತಿ

ನವದೆಹಲಿ : ನವದೆಹಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ಕೊರೋನಾ ವೈರಸ್ ಲಸಿಕೆ ಹಾಕಿಸಿಕೊಂಡರು.

60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಕೊರೊನಾ ವೈರಸ್ ಲಸಿಕೆ ಹಾಕುವ ಅಭಿಯಾನ ಪ್ರಾರಂಭಿಸಿದ ಎರಡು ದಿನಗಳ ನಂತರ, ಕೋವಿಡ್-19 ವಿರುದ್ಧ ಲಸಿಕೆ ಹಾಕಿಸಿದರು.

ಇದಕ್ಕೂ ಮುನ್ನ ಇಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸಾಂಕ್ವೆಲಿಮ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್ ಸಿ) ಕೋವಿ-19 ಲಸಿಕೆಯ ಮೊದಲ ಡೋಸ್ ಅನ್ನು ತೆಗೆದುಕೊಂಡರು.

Related