ಮಧ್ಯಪ್ರಿಯರಿಗೆ ಬೆಲೆ ಏರಿಕೆ ಬರೆ

ಮಧ್ಯಪ್ರಿಯರಿಗೆ ಬೆಲೆ ಏರಿಕೆ ಬರೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 14ನೇ ರಾಜ್ಯ ಬಜೆಟ್ ಮಂಡನೆಯಲ್ಲಿ, ಸುಮಾರು 3.35 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಅನ್ನು ಸಿದ್ದರಾಮಯ್ಯ ಮಂಡಿಸಲಿದ್ದಾರೆ. ಈ ಬಜೆಟ್ ನಲ್ಲಿ ಅಬಕಾರಿ ಮೇಲಿನ ಸುಂಕವನ್ನು 20% ಗೆ ಹೆಚ್ಚಿಸಿದ್ದಾರೆ. ಇದರ ಪರಿಣಾಮವಾಗಿ ಮಧ್ಯದ ಮೇಲಿನ ದರವನ್ನು ಹೆಚ್ಚಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ 2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಮದ್ಯದ ಮೇಲಿನ ಸುಂಕ ಏರಿಕೆ ಜುಲೈ 20 ರಿಂದ ಜಾರಿಯಾಗಲಿದೆ. ವಿಸ್ಕಿ, ರಂ, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಮೇಲೆ ಎಲ್ಲಾ ಘೋಷಿತ 18 ಸ್ಲ್ಯಾಬ್ ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಶೇಕಡ 20ರಷ್ಟು ಹೆಚ್ಚಳವಾಗಲಿದೆ.

ಕಾಂಗ್ರೆಸ್ ಸರ್ಕಾರದ ಅಬಕಾರಿ ಸುಂಕ ಹೆಚ್ಚಳ ಹಿನ್ನೆಲೆಯಲ್ಲಿ ಮದ್ಯದ ದರ ದುಬಾರಿ ಆಗಲಿದೆ. ಇನ್ನು ಈ ದುಬಾರಿ ಹೊಸ ದರ ಜುಲೈ 20ರಿಂದಲೇ ಜಾರಿಯಾಗುವ ಸಾಧ್ಯತೆಯಿದೆ. ಅಬಕಾರಿ ಸುಂಕ ಹೆಚ್ಚಳ ಕುರಿತಂತೆ ಸರ್ಕಾರ ಕರಡು ಪ್ರಕಟಿಸಿದೆ. 7 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸುವಂತೆ ಕೋರಿದೆ. ಬ್ರಾಂದಿ, ವಿಸ್ಕಿ, ರಮ್, ಜಿನ್ ಎಲ್ಲಾ ಬಗೆಯ ಮದ್ಯದ ಬೆಲೆ ಸೇರಿದಂತೆ ಹಾಲಿ ಇರುವ ಸುಂಕಕ್ಕಿಂದ   ಶೇ.20 ಏರಿಕೆ ಆಗುತ್ತಿದೆ.  ಇನ್ನು ಬಿಯರ್ ಮೇಲಿನ ಅಬಕಾರಿ ಸುಂಕ ಶೇ.10ರಷ್ಟು ಏರಿಕೆಯನ್ನು ಪ್ರಸ್ತಾಪಿಸಲಾಗಿದೆ.

Related