ಶಾಲೆಗಳ ಸ್ವಚ್ಛತೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ

ಶಾಲೆಗಳ ಸ್ವಚ್ಛತೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ

ಕೊಪ್ಪಳ  : ಜ.1ರಿಂದ ಶಾಲೆಗಳು ಆರಂಭವಾಗುತ್ತಿರುವುದರಿAದ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರು ಶಾಲೆಗಳ ಸ್ವಚ್ಛತೆ, ಶಾಲಾ ಕೊಠಡಿ, ಅಡುಗೆ ಕೊಠಡಿ ಮತ್ತು ಮಕ್ಕಳ ಕ್ರೀಡಾ ಸಾಮಗ್ರಿಗಳನ್ನು ಸ್ಯಾನಿಟೈಸರ್ ಮಾಡಿ ಸ್ವಚ್ಛಗೊಳ್ಳಿಸಬೇಕು ಎಂದು ಜಿಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದರು.

ಕೊಪ್ಪಳ ಜಿಲ್ಲಾಡಳಿತ, ಜಿ.ಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯಲ್ಲಿನ ಶಾಲೆಗಳ ಪುನರಾರಂಭ ಮತ್ತು ವಿದ್ಯಾಗಮ ಕಾರ್ಯಕ್ರಮ ಅನುಷ್ಠಾನ ಕುರಿತ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಮಕ್ಕಳಿಗೆ ಆಹಾರ ಧಾನ್ಯ ವಿತರಣೆ ಮಾಡಬೇಕು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಜಿಲ್ಲಾ ವೈದ್ಯಾಧಿಕಾರಿಗಳು ಕೋವಿಡ್ ಪರೀಕ್ಷೆಯ ವ್ಯವಸ್ಥೆಯನ್ನು ತಾಲೂಕು ಮತ್ತು ಗ್ರಾಮ ಪಂಚಾಯತಿಗಳ ಮುಖಾಂತರ ಕ್ರಮವಹಿಸಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಿಂದ  ನೆರವು ಪಡೆದು ಶಾಲೆಯ ಸ್ವಚ್ಛತೆ, ಸ್ಯಾನಿಟೈಸರ್, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯಗಳ ಸ್ವಚ್ಛತೆ ಇತ್ಯಾದಿಗಳನ್ನು ಶಾಲೆಯ ಮುಖೋಪಾಧ್ಯಾಯರು ಮಾಡಿಸಬೇಕು ಎಂದರು.

50 ವರ್ಷ ಮೇಲ್ಪಟ್ಟ ಎಲ್ಲಾ ಶಿಕ್ಷಕರು, ಅಧಿಕಾರಿಗಳು ಫೇಸ್ ಮಾಸ್ಕ್ ಜೊತೆಗೆ ಫೇಸ್ ಶೀಲ್ಡ್ ಧರಿಸುವುದು ಕಡ್ಡಾಯ. ಪ್ರತಿ ಶಾಲೆಯ ಮುಖ್ಯೋಪಾಧ್ಯಾಯರು ತರಗತಿಗಳ ಪ್ರಾರಂಭದ ವೇಳಾಪಟ್ಟಿಯನ್ನು ಪ್ರಕಟಿಸಬೇಕು. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ಗಂಟೆಯಿAದ 12.30ರ ವರೆಗೆ ತರಗತಿಗಳನ್ನು ನಡೆಸಬೇಕು. ಶನಿವಾರದಂದು ಮಾತ್ರ ಬೆಳಗ್ಗೆ 8.30 ರಿಂದ 11.15 ಗಂಟೆ ವರೆಗೆ ತರಗತಿಗಳನ್ನು ನಡೆಸಬೇಕು. ವಿದ್ಯಾಗಮ ಕಾರ್ಯಕ್ರಮವನ್ನು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಂಗಳವಾರ ಮತ್ತು ಗುರುವಾರ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಧ್ಯಾಹ್ನ 2 ಗಂಟೆಯಿAದ 4.30ರ ವರೆಗೆ ತರಗತಿಗಳನ್ನು ನಡೆಸಬೇಕು. ತಾಲ್ಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ವಿದ್ಯಾಗಮ ಯಶಸ್ವಿಗೊಳಿಸಬೇಕು ಮತ್ತು ಶಾಲೆಗಳಿಗೆ ಆಗಾಗ ಅಧಿಕಾರಿಗಳು ಭೇಟಿ ನೀಡಿ ಮಾರ್ಗದರ್ಶನ ನೀಡಬೇಕೆಂದು ಹೇಳಿದರು.

 

Related